ಕಟ್ಟಡ ಕಾರ್ಮಿಕರ ಸಂಭ್ರಮ ಆಚರಣೆ

district koppal building labours celebration scholorship
Published on

ಕೊಪ್ಪಳ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಪಾವತಿಗೆ ಹೈಕೋರ್ಟ್​ ಸೂಚಿಸಿದ್ದನ್ನು ಸ್ವಾಗತಿಸಿ ಕಾರ್ಮಿಕರು ಮತ್ತವರ ಮಕ್ಕಳು ಕೊಪ್ಪಳದಲ್ಲಿ ಶನಿವಾರ ಸಂಭ್ರಮ ಆಚರಿಸಿದರು.

ಕರ್ನಾಟಕ ಕಟ್ಟಡ ಮತ್ತು ಇತರೆ ನಿಮಾರ್ಣ ಕಾರ್ಮಿಕ ಕಲ್ಯಾಣ ಮಂಡಳಿಯು ಅರ್ಜಿ ಸಲ್ಲಿಸಿದ ಎಲ್ಲ ಮಕ್ಕಳಿಗೂ 2021 ಅಧಿಸೂಚನೆ ಅನ್ವಯವೇ ಬಾಕಿ ಇರುವ ಮೂರು ವರ್ಫಿದ ಶೈಕ್ಷಣಿಕ ಧನಸಹಾಯ ವಿತರಿಸಲು ತ್ವರಿತಗತಿಯಲ್ಲಿ ಕ್ರಮವಹಿಸಬೇಕೆಂದು ಕರ್ನಾಟಕ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು 2023 ರಿಂದ ಶೇ 70 ರಿಂದ ಶೇ. 80 ರಫಿ್ಟು ಕಡಿತ ಮಾಡಿತ್ತು. ಕಲ್ಯಾಣ ಮಂಡಳಿಯ ಈ ನಿರ್ಧಾರವನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿಮಾರ್ಣ ಕಾರ್ಮಿಕರ ಫೆಡರೇಫಿನ್​ (ಅಘಈಋ-ಅಋಖಿಗ) ಸಂಘಟನೆಯು ಹೈಕೋರ್ಟ್​ ಮೊರೆ ಹೋಗಿತ್ತು.

ರಿಟ್​ ಅರ್ಜಿ ಮಾನ್ಯಮಾಡಿದ್ದ ನ್ಯಾಯಮೂರ್ತಿ ಶ್ರೀ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು, 2024 ಏಪ್ರಿಲ್​ ನಲ್ಲೇ ಮಧ್ಯಂತರ ಆದೇಶ ನೀಡಿ, ಅರ್ಜಿ ಸಲ್ಲಿಸಿದ ಇಬ್ಬರು ವಿದ್ಯಾರ್ಥಿನಿಯರಿಗೆ ದಂಡ ಸಹಿತ ಶೈಕ್ಷಣಿಕ ಸಹಾಯಧನ ಪಾವತಿಸುವಂತೆ ಆದೇಶಿಸಿತ್ತು. ಇದೀಗ ಅಂತಿಮ ತೀರ್ಪು ಹೊರ ಬಂದಿದ್ದು, ಅದರ ಅನ್ವಯ 2020&- 21, 2021&- 22 ಹಾಗೂ 2022 & 23 ನೇ ಸಾಲಿನ ಶೈಕ್ಷಣಿಕ ಸಹಾಯಧನವನ್ನು 2021 ರ ಅಧಿಸೂಚನೆ ಅನ್ವಯವೇ ಬಿಡುಗಡೆ ಮಾಡುವಂತೆ ಆದೇಶ ನೀಡಿದೆ. ಮಾತ್ರವಲ್ಲ ಸದರಿ ಆದೇಶವನ್ನು ಜಾರಿ ಮಾಡಲು ಅಗತ್ಯ ಕ್ರಮವಹಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದೆ. ಅಲ್ಲದೆ 2023 ರ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿ ಈ ಹಿಂದಿನ 2021 ರ ಅಧಿಸೂಚನೆ ಪ್ರಕಾರವೇ ವಿದ್ಯಾರ್ಥಿ ವೇತನ ಪಾವತಿಸಲು ಆದೇಶಿಸಿದೆ ಎಂದರು.

ಕಟ್ಟಡ ಕಾರ್ಮಿಕರ ಸಂದ ಜಿಲ್ಲಾಧ್ಯಕ್ಷ ಕಾಸಿಂ ಸರ್ದಾರ, ಮಂಜಪ್ಪ, ಹೊನ್ನೂರಸಾಬ, ಶಿವಾನಂದಪ್ಪ, ಮೆಹಬೂಬ್​, ಸಾವಿತ್ರಿ, ದುರ್ಗಮ್ಮ, ಅಲ್ಲಾಭಕ್ಷ, ಷಾವಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net