ನೈಜತೆ ತಿಳಿಯಲು ಸಮೀಕ್ಷೆ ಅಗತ್ಯ

district koppal cast survey koppal vv programme
Published on

ಕೊಪ್ಪಳ: ಸಮಾಜದ ನೈಜ ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಮೀಕ್ಷೆ ಅಗತ್ಯ. ಇಂತಹ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡರೆ ಸಂಶೋಧನಾ ಮನೋಭಾವ ಬೆಳೆದು ಸಮಾಜಮುಖಿ ಹೊಣೆಗಾರಿಕೆ ಅವರಿವ ಶಕ್ತಿ ಸಿಗಲಿದೆ ಎಂದು ಕೊಪ್ಪಳ ವಿವಿ ಕುಲಪತಿ ಡಾ.ಬಿ.ಕೆ.ರವಿ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ವಿವಿಯಿಂದ ಆಯೋಜಿಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀೆ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮೀಕ್ಷೆ ಕೇವಲ ಅಂಕಿಅಂಶಗಳ ಸಂಗ್ರಹವಲ್ಲ. ಸಮಾಜದ ದಿಕ್ಕು ತೋರಿಸುವ ದಾರಿದೀಪ. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರ ಸಮಸ್ಯೆಗಳ ಪರಿಹಾರಕ್ಕೆ ಮಾರ್ಗದರ್ಶಿ ಎಂದರು.

ವಿವಿ ಆಡಳಿತಾಧಿಕಾರಿ ಪ್ರೊ.ತಿಮ್ಮಾರೆಡ್ಡಿ ಮೇಟಿ ಮಾತನಾಡಿ, ಸಮಾಜ ಮತ್ತು ಶಿಕ್ಷಣ ಪರಸ್ಪರ ಪೂರಕ ಅಂಶಗಳು. ನಿಖರ ಅಂಕಿ&ಅಂಶಗಳ ಆಧಾರದ ಮೇಲೆ ಗ್ರಾಮೀಣಾಭಿವೃದ್ಧಿಗೆ ವೈಜ್ಞಾನಿಕ ದೃಷ್ಟಿಕೋನ ಒದಗಿಸಲು ಸಾಧ್ಯವೆಂದರು.

ಪ್ರೊ.ವೈ.ಬಿ.ಅಂಗಡಿ ಮಾತನಾಡಿ, ಗ್ರಾಮೀಣ ಜನರ ಶಿಕ್ಷಣ, ಆರೋಗ್ಯ, ಜೀವನಮಟ್ಟ, ಆರ್ಥಿಕ ಪರಿಸ್ಥಿತಿ, ಸಾಮಾಜಿಕ ಹಿನ್ನಲೆ ಹಾಗೂ ಸರ್ಕಾರಿ ಯೋಜನೆಗಳ ಅನುಷ್ಠಾನಕ್ಕೆ ಸಮೀೆ ಸಹಕಾರಿ. ಪರಿಣಾಕಾರಿ ಯೋಜನೆ ಜಾರಿಗೂ ಸಹಕಾರಿ ಸಮಾಜ ಬದಲಾವಣೆಗೆ ನೆರವಾಗಲಿದೆ ಎಂದು ತಿಳಿಸಿದರು. ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net