ಹುದ್ದೆ ಆಕಾಂಕ್ಷಿಗಳಿಗೆ ಎಚ್ಚರಿಕೆ

Published on

ಕೊಪ್ಪಳ: ತಾಲೂಕು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ 9 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 88 ಸಹಾಯಕಿಯರ ಗೌರವ ಸೇವೆ ಹುದ್ದೆಗಳ ಭರ್ತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಧ್ಯವರ್ತಿಗಳ ಮೋಸಕ್ಕೆ ಬಲಿಯಾಗದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಹುದ್ದೆ ಭರ್ತಿಗೆ 2024ರ ಅಕ್ಟೋಬರ್​ 23ವರೆಗೆ ಅರ್ಜಿ ಕರೆಯಲಾಗಿತ್ತು. ಶ್ರೀವೇ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟವಾಗಲಿದೆ. ಅಂತಿಮವಾಗಿ ಆಯ್ಕೆಯಾದವರಿಗೆ ಉಪನಿರ್ದೇಶಕರ ಕಚೇರಿಯಿಂದ ಅಭ್ಯರ್ಥಿಗಳ ವಿಳಾಸಕ್ಕೆ ಆದೇಶ ಪತ್ರ ಬರಲಿದೆ. ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು ಅಥವಾ ಇರರೊಂದಿಗೆ ಹಣಕಾಸು ವ್ಯವಹಾರ ನಡೆಸಬಾರದೆಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net