ಕೇಂದ್ರ ಬಜೆಟ್​ನಲ್ಲಿ ರಾಜ್ಯಕ್ಕೆ ಅನ್ಯಾಯ, ಸಚಿವ ತಂಗಡಗಿ ಬೇಸರ

district koppal minister shivaraj tangadagi bspl company issue
SHIVARAJ TANGADAGI
Published on

ಕೊಪ್ಪಳ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಮಂಡಿಸಿರುವ 2025-26ನೇ ಸಾಲಿನ ಬಜೆಟ್​ ನಿರಾಶದಾಯಕವಾದ ಬಜೆಟ್​ ಆಗಿದ್ದು, ಬಜೆಟ್​ ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ.

ಗ್ರಾಮೀಣ ಭಾಗದಲ್ಲಿ ಯಾರ ಬಳಿಯೂ ಹಣವಿಲ್ಲ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯಾವುದೇ ಯೋಜನೆಗಳನ್ನು ಘೋಫಿಣೆ ಮಾಡಿಲ್ಲ. ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರು ಕಣ್ಣೀರು ಹಾಕುವಂತಾಗಿದೆ. ವಿಪರ್ಯಾಸವೆಂದರೆ ದೇಶದಲ್ಲಿ ಅಂದಾಜು ಶೇ.45ರಿಂದ 50ರಫಿ್ಟು ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಉದ್ಯೋಗ ಸೃಷ್ಟಿ ಬಗ್ಗೆ ಯಾವುದೇ ಪ್ರಸ್ತಾಪ ಮಾಡದಿರುವುದು ನಿಜಕ್ಕೂ ನಮ್ಮ ದುರ್ದೈವ.

ನಮ್ಮರಾಜ್ಯಗಳಿಗೆ ಅನ್ಯಾಯ ಮಾಡಿದೆ. ಬಜೆಟ್​ ನಿಂದ ಸಣ್ಣ ಕೈಗಾರಿಕೆಗಳಿಗೆ ಯಾವುದೇ ಅನುಕೂಲವಾಗಿಲ್ಲ. ರೈಲ್ವೆ, ಶಿಕ್ಷಣ, ಮೂಲಸೌಲಭ್ಯ ಯೋಜನೆಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಇದು ರೈತರ, ಮಹಿಳೆಯರ, ದಲಿತರ ವಿರೋಧಿ ಬಜೆಟ್​ ಆಗಿದೆ.

ಅಕ್ಟೋಬರ್​ ನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಹಾರ ರಾಜ್ಯಕ್ಕೆ ವಿಶೇಫಿವಾದ ಯೋಜನೆಗಳನ್ನು ಘೋಷಿಸುವ ಮೂಲಕ ಬಜೆಟ್​ ನಲ್ಲಿ ಕೇಂದ್ರ ವಿತ್ತ ಸಚಿವರು ಬಿಹಾರ ರಾಜ್ಯದ ಜಪಾ ಮಾಡಿದ್ದಾರೆ.

ಕೇಂದ್ರದಿಂದ ನಾವು ಏನನ್ನು ನಿರೀಕ್ಷೆ ಮಾಡಿರಲಿಲ್ಲ. ಈ ಹಿಂದೆ ಬಜೆಟ್​ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5330 ಕೋಟಿ ಅನುದಾನ ನೀಡುವುದಾಗಿ ಘೋಫಿಣೆ ಮಾಡಿದ್ದರು. ಇಲ್ಲಿ ತನಕ ನಯಾಪೈಸೆ ನೀಡಿಲ್ಲ. ನಮಗೆ ಕೊಡಬೇಕಾದ ನ್ಯಾಯಯುತವಾದ ತೆರಿಗೆ ಪಾಲಿನ ಹಣವನ್ನೇ ಕೇಂದ್ರ ನೀಡುತ್ತಿಲ್ಲ. ಇಂತಹವರಿಂದ ನಾವು ಏನನ್ನು ನಿರೀಕ್ಷೆ ಮಾಡಲು ಸಾಧ್ಯ? ಒಟ್ಟಾರೆ ಬಜೆಟ್​ ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net