ಸ್ವಚ್ಛತೆ ನಮ್ಮ ಮನೆಯಿಂದಲೆ ಆರಂಭವಾಗಲಿ, ಡಿಸಿ ಡಾ. ಸುರೇಶ ಬಿ. ಇಟ್ನಾಳ ಸಲಹೆ

district koppal cleaning work dc office dc suresh itanal
Published on

ಕೊಪ್ಪಳ: ಮೊದಲು ನಮ್ಮ ಮನೆಯಿಂದಲೇ ಸ್ವಚ್ಛತೆ ಆರಂಭವಾಗಬೇಕು. ಸೆ.17ರಿಂದ ಅ.2ವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಸ್ವಚ್ಛತೆ ಕಾಪಾಡೋಣ ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿ ಮಾತನಾಡಿದರು.

ಜನರು ಎಲ್ಲೆಂದರಲ್ಲಿ ಕಸ ಚೆಲ್ಲಬಾರದು. ಹಸಿ, ಒಣ ಕಸವೆಂದು ವಿಂಗಡಿಸಿ. ನಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕುವುದನ್ನು ತಡೆಯಲು ರಂಗೋಲಿ ಬಿಡಿಸಿ ಜಾಗೃತಿ ಮೂಡಿಸಲಾಗುತ್ತಿದೆ. ನಗರ ಸ್ಥಳಿಯ ಸಂಸ್ಥೆ ವ್ಯಾಪ್ತಿಯಲ್ಲಿ ಒಂದು ದಿನ, ಒಂದು ಗಂಟೆ ಸ್ವಚ್ಛತೆ ಹೆಸರಿನಲ್ಲಿ ಅಭಿಯಾನ ಮಾಡುತ್ತಿದ್ದೇವೆ. ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.

ಜಿಪಂ ಸಿಇಒ ವರ್ಣಿತ್​ ನೇಗಿ ಮಾತನಾಡಿ, ಜಿಲ್ಲೆಯ 153 ಗ್ರಾಪಂಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.

ಎಸ್ಪಿ ಡಾ.ರಾಮ್​ ಎಲ್​.ಅರಸಿದ್ದಿ ಮಾತನಾಡಿ, ಸ್ವಚ್ಛತೆ ನಿರಂತರ ಪ್ರಕ್ರಿಯೆ. ಕೇವಲ ಒಂದು ದಿನದ ಕೆಲಸವಲ್ಲ. ಜಿಲ್ಲೆಯ ಪೊಲೀಸ್​ ಠಾಣೆಗಳಲ್ಲಿ ಆಗಾಗ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಜಿಪಂ ಯೋಜನಾ ನಿರ್ದೇಶಕ ಪ್ರಕಾಶ ವಿ. ಸ್ವಚ್ಛತಾ ಸೇವೆ ಪ್ರತಿಜ್ಞಾ ವಿಧಿ ಬೋಧಿಸಿದರು. ಎಡಿಸಿ ಸಿದ್ರಾಮೇಶ್ವರ, ಜಿಪಂ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್​., ಡಿಡಿಪಿಯು ಜಗದೀಶ ಜಿ.ಎಚ್​., ಹಿಂದುಳಿದ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿ ನಾಗಮಣಿ ಹೊಸಮನಿ, ವಾರ್ತಾಧಿಕಾರಿ ಡಾ. ಸುರೇಶ್​ ಜಿ., ನಗರಸಭೆ ಪೌರಾಯುಕ್ತರಾದ ವೆಂಕಟೇಶ ನಾಗನೂರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net