ಕೊಪ್ಪಳ: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಮಾ.9 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
ಬೆಳಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಬಾಲಭವನ ಸೋಸೈಟಿ ಮತ್ತು ಇತರ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿರುವ ಮಕ್ಕಳ ವಿವಿಧ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಕೊಪ್ಪಳದ ಭಾಗ್ಯನಗರ ರಸ್ತೆಯ ಕಠಾರೆ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಹಯೋಗದಲ್ಲಿ ಹಮ್ಮಿಕೊಂಡ ಕೆ.ಯು.ಡಬ್ಲ್ಯೂ.ಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ರಾತ್ರಿ 8.20ಕ್ಕೆ ಬೆಂಗಳೂರಿಗೆ ಪ್ರಯಾಣಿಸುವರು.