ತಪ್ಪಿತಸ್ಥರ ವಿರುದ್ಧ ಕ್ರಮ, ಹುಬ್ಬಳ್ಳಿ ಕರ ಸೇವಕರ ಬಂಧನಕ್ಕೆ ಸಿಎಂ ಸಮರ್ಥನೆ

district-koppal-cm-siddaramayya-visit-basapur-hubli-issue
Published on

ಕೊಪ್ಪಳ: ಹುಬ್ಬಳ್ಳಿ ರಾಮ ಜನ್ಮಭೂಮಿ ಗಲಾಟೆ ವಿಷಯವಾಗಿ ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಇದರಲ್ಲಿ ಯಾವುದೇ ದ್ವೇಷ ರಾಜಕಾರಣವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಸಾಪುರ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು.

ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ. ಹೈಕೋರ್ಟ್ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಲ್ಕಿ ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ತಪ್ಪು ಮಾಡಿದವರನ್ನು ಸುಮ್ಮನೇ ಬಿಡಬೇಕೆನ್ರಿ ಎಂದು ಪ್ರಶ್ನಿಸಿದರು.

ಅತಿಥಿ ಉಪನ್ಯಾಸಕರ ಜೊತೆ ಮಾತುಕತೆ ನಡೆಸಿದ್ದೇವೆ. ಪ್ರತಿಭಟನೆ ವಾಪಸ್ ಪಡೆಯಲು ಮನವಿ ಮಾಡಿದ್ದೇವೆ. ಆದರೂ ಅವರು ಪಾದಯಾತ್ರೆ ಮಾಡುತ್ತಿದ್ದಾರೆ. ಸೇವಾ ಕಾಯಂ ಮಾಡುವಂತೆ ಅವರ ಬೇಡಿಕೆ ಇದೆ. ಕಾನೂನು ತೊಡಕಿನಿಂದ ಸೇವೆ ಖಾಯಂ ಮಾಡುವುದು ಕಷ್ಟ ಸಾಧ್ಯ ಎಂದರು.

ರಾಮಮಂದಿರ ಉದ್ಘಾಟನೆಗೆ ರಜೆ ಘೋಷಣೆಗೆ ಬಿಜೆಪಿ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ. ನಾವು ಏಕೆ ರಜೆ ನೀಡಬೇಕು ಎಂದು ತಿಳಿಸಿದರು.

ತಾಂತ್ರಿಕ ಸಮಸ್ಯೆ ಕಾರಣ ಬರ ಪರಿಹಾರ ವಿತರಣೆ ಆಗಿಲ್ಲ. ಆದಷ್ಟು ಬೇಗ ಬಿಡುಗಡೆ ಮಾಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net