ಸಂವಿಧಾನ ಉಳಿಸಿ ಪಥ ಸಂಚಲನ

district koppal congress jaatha party amregouda bayyapuar
Published on

ಕೊಪ್ಪಳ: ನಗರದ ಜಿಲ್ಲಾ ಕಾಂಗ್ರೆಸ್​ ಕಚೇರಿಯಿಂದ ಜಿಲ್ಲಾಡಳಿತ ಭವನದವರೆಗೆ ಕಾಂಗ್ರೆಸ್​ ಕಾರ್ಯಕರ್ತರು ಶುಕ್ರವಾರ ಹಮ್ಮಿಕೊಂಡಿದ್ದ ಸಂವಿಧಾನ ಉಳಿಸಿ&ಪ್ರಜಾಪ್ರಭುತ್ವ ರಸಿ ಪಥಸಂಚಲನಕ್ಕೆ ಸಚಿವ ಶಿವರಾಜ ತಂಗಡಗಿ ಚಾಲನೆ ನೀಡಿದರು.

ಹೊಸಪೇಟೆ ರಸ್ತೆ ಕಾಂಗ್ರೆಸ್​ ಕಚೇರಿಯಿಂದ ಜಿಲ್ಲಾಸ್ಪತ್ರೆ ಮುಂಭಾಗ ಮಾರ್ಗವಾಗಿ ಜಿಲ್ಲಾಡಳಿತ ಭವನದವರೆಗೆ ಸಾಗಿದರು. ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ಅಮರೇಗೌಡ ಬಯ್ಯಾಪುರ, ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾವೇಂದ್ರ ಹಿಟ್ನಾಳ, ಮಾಜಿ ಸಂಸದ ಸಂಗಣ್ಣ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ಕೆಪಿಸಿಸಿ ಉಪಾಧ್ಯಕ್ಷ ಜಾನ್​ ವೇಸ್ಲೀ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ, ಎಸ್ಸಿ ಟಕ ಜಿಲ್ಲಾಧ್ಯಕ್ಷ ಗಾಳೆಪ್ಪ ಪೂಜಾರ, ಕಾರ್ಯದರ್ಶಿ ಪದ್ಮಾವತಿ ಕಂಬಳಿ, ಅಕ್ಬರ್​ ಪಾಷಾ ಪಲ್ಟನ್​, ಜ್ಯೋತಿ ಗೊಂಡಬಾಳ, ಎಸ್​.ಬಿ.ನಾಗರಳ್ಳಿ, ಗವಿಸಿದ್ದಪ್ಪ ಮುದಗಲ್​ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net