ಇಂದಿರಾಗಾಂಧಿ ದೇಶ ಕಂಡ ಶಕ್ತಿ

district koppal congress vehicle kpcc
Published on

ಕೊಪ್ಪಳ: ದೇಶ ಕಂಡ ಪ್ರಭಾವಶಾಲಿ ಮಹಿಳೆಯಲ್ಲಿರ ಮಾಜಿ ಪ್ರಧಾನಿ ಇಂದಿರಾಗಾಂಧಿ ಒಬ್ಬರು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸದಸ್ಯೆ ಜ್ಯೋತಿ ಗೊಂಡಬಾಳ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ ಅಂಗವಾಗಿ ಹಮ್ಮಿಕೊಂಡ ಜಾಗೃತಿ ವಾಹಿನಿಗೆ ಗುರುವಾರ ಚಾಲನೆ ನೀಡಿ ಮಾತನಾಡಿದರು.

ಕಾರ್ಖಾನೆಗಳಿಂದ ಅಪಾರ ಪರಿಸರ ಹಾನಿಯಾಗುತ್ತಿದೆ. ಹೊಸ ಕಾರ್ಖಾನೆಗಳನ್ನು ಆರಂಭಿಸುವುದು ಬೇಡ. ಜನವು ವಾಹನ ಬಳಕೆ ಕಡಿಮೆ ಮಾಡಬೇಕು. ತ್ಯಾಜ್ಯ ವಿಲೇವಾರಿಗೆ ಜನರು ನಗರ, ಸ್ಥಳಿಯ ಸಂಸ್ಥೆಗಳೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಕೆಪಿಸಿಸಿಯಿಂದ ಪ್ರಚಾರ ವಾಹನ ಎಲ್ಲ ಜಿಲ್ಲೆಗಳಲ್ಲಿ ಓಡಾಡಲಿದೆ. ಮಾಲಿನ್ಯ ನಿಯಂತ್ರಣ ಮತ್ತು ದೇಶದ ಪ್ರಗತಿಗೆ ಇಂದಿರಾಗಾಂಧಿ ನೀಡಿದ ಕೊಡುಗೆಗಳ ಬಗ್ಗೆ ಜಾಗೃತಿ ಮೂಡಿಸಲಿದೆ. ಮೂರು ದಿನ ವಾಹನ ಜಿಲ್ಲೆಯ ಎಲ್ಲ ಭಾಗಗಳಲ್ಲಿ ಸಂಚರಿಸಲಿದೆ ಎಂದು ಮಾಹಿತಿ ನೀಡಿದರು.

ನಗರಸಭೆ ಸದಸ್ಯರಾದ ಬಸಯ್ಯಸ್ವಾಮಿ ಹಿರೇಮಠ, ಅಕ್ಬರ್ ಪಾಷಾ ಪಲ್ಟನ್, ಡಿಸಿಸಿ ಕಾರ್ಯದರ್ಶಿ ಪದ್ಮಾ ಕಂಬಳಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ಕಿಮ್ಸ್ ನಾಮನಿರ್ದೇಶಿತ ಸದಸ್ಯ ಸಲೀಂ ಅಳವಂಡಿ, , ಜಿಲ್ಲಾ ರಾಜೀವಗಾಂಧಿ ಪಂಚಾಯತ್ರಾಜ್ ಸೆಲ್ ಅಧ್ಯಕ್ಷ ಸುರೇಶ ದಾಸರಡ್ಡಿ, ಜಾಫರ್ ಸಂಗಟಿ, ಭೀಮಣ್ಣ ಹಿರೇಮನಿ, ಜಿಲಾನ್ ತಟಗಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net