

ಕೊಪ್ಪಳ: ಜಿಲ್ಲೆಯಲ್ಲಿ ಜನವರಿ 26 ರಿಂದ ಫೆಬ್ರವರಿ 23 ರವರೆಗೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಶುಕ್ರವಾರ ಕುಷ್ಟಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ನಡೆಯಿತು.
ಕುಷ್ಟಗಿ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಜಾಥಾ ಮೆರವಣಿಗೆಗೆ ಶಾಲಾ ವಿದ್ಯಾರ್ಥಿಗಳು ನೃತ್ಯದ ಮೂಲಕ ಸಂಭ್ರಮದ ಸ್ವಾಗತ ಕೋರಿದರು. ಅದರಂತೆ ಜುಮಲಾಪುರ, ಕಿಲ್ಲಾರಹಟ್ಟಿ, ಮುದೇನೂರ, ಸಿರಗುಂಪಿ, ಕೇಸೂರುಗಳಲ್ಲಿ ಜಾಥಾ ಮೆರವಣಿಗೆಗೆ ಅದ್ದೂರಿ ಸ್ವಾಗತ ಕೋರಲಾಯಿತು. ಇದರ ಅಂಗವಾಗಿ ಗ್ರಾಮಗಳಲ್ಲಿ ಸಂವಿಧಾಣ ಪೀಠಿಕೆ ಓದುವುದು, ಪ್ರಮುಖ ರಸ್ತೆಗಳಲ್ಲಿ ಶಾಲಾ ಮಕ್ಕಳು, ಗ್ರಾಮಸ್ಥರಿಂದ ಜಾಥಾವನ್ನು ನಡೆಸಲಾಯಿತು.
ಈ ಸಂದರ್ಭ ಗ್ರಾಮಗಳ ಮುಖಂಡರು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಶಾಲಾ ಮಕ್ಕಳು, ಶಿಕ್ಷಕರು ಉಪಸ್ಥಿತರಿದ್ದರು.