ಸಹಕಾರ ರತ್ನ ಪ್ರಶಸ್ತಿಗೆ ವಿವರ ಸಲ್ಲಿಸಲು ಸೂಚನೆ

Published on

ಕೊಪ್ಪಳ: ಶ್ರೇಷ್ಠ ಸಹಕಾರಿಗಳನ್ನು ಗುರುತಿಸಿ "ಸಹಕಾರ ರತ್ನ ಪ್ರಶಸ್ತಿ' ನೀಡಲು 2024ನೇ ಸಾಲಿನ ಪ್ರಶಸ್ತಿಗೆ ಅರ್ಹರಾದ ಸಹಕಾರಿಗಳನ್ನು ಆಯ್ಕೆ ಮಾಡಬೇಕಾಗಿದ್ದು, ಅರ್ಹರು ತಮ್ಮ ವಿವರವನ್ನು ಸಲ್ಲಿಸುವಂತೆ ಸಹಕಾರ ಸಂಘಗಳ ಉಪ ನಿಬಂಧಕ ದಸ್ತಗಿರ ಅಲಿ ತಿಳಿಸಿದ್ದಾರೆ.

ಸಹಕಾರ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ನಿಷ್ಟಳಂಕ ಸೇವೆ ಸಲ್ಲಿಸಿರುವ ಜಿಲ್ಲೆಯ ನಿವಾಸಿಗಳು ತಮ್ಮ ವೈಯಕ್ತಿಕ ಪರಿಚಯ, ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವಿವರ, ಸಹಕಾರ ಚಳವಳಿಯಲ್ಲಿ ತೊಡಗಿಸಿಕೊಂಡಿರುವ ವಿವರ ಹಾಗೂ ಪೂರಕ ಮಾಹಿತಿ ಅಗತ್ಯ ದಾಖಲೆಗಳೊಂದಿಗೆ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಅ.21ರೊಳಗೆ ಸಲ್ಲಿಸುವಂತೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net