

ಕೊಪ್ಪಳ: ಎಸ್ಸಿಪಿ&ಟಿಎಸ್ಪಿಯಡಿ ಬಿಡುಗಡೆಯಾದ ಅನುದಾನವನ್ನು ನಿಗದಿತ ಕಾಲವಧಿಯಲ್ಲಿ ರ್ನಿದಿಷ್ಟ ಉದ್ದೇಶಕ್ಕೆ ಮಾತ್ರ ಬಳಸುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎಸ್ಸಿಪಿ&ಟಿಎಸ್ಪಿ ಯೋಜನಗೆಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ತಳ ಸಮುದಾಯ ಅಭಿವೃದ್ಧಿಗಾಗಿ ಸರ್ಕಾರ ಅನುದಾನ ಬಿಡುಡಗೆ ಮಾಡುತ್ತದೆ. ಹೀಗಾಗಿ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯೋಜನೆ ರೂಪಿಸಿ ಅನುಷ್ಠಾನ ಮಾಡಿ. ಅನುದಾನವನ್ನು ಅರ್ಹ ಫಲಾನುಭವಿಗಳು, ಯೋಜನೆಗಳ ಜಾರಿಗೆ ಬಳಸಿ. ನಿಗದಿಪಡಿಸಿದ ಕಾಲವಧಿಯಲ್ಲಿ ಅನುಷ್ಠಾನಗೊಳಿಸಿ. ಯಾವುದೇ ಕಾರಣಕ್ಕೂ ಅನ್ಯ ಕಾಮಗಾರಿಗಳಿಗೆ ಅನುದಾನ ಬಳಸಬೇಡಿ. ನಿಗದಿತ ಯೋಜನೆಗೆ ಬಳಸಿ. ಬಾಕಿ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ. ಕಾಲನಿಗಳ ಅಭಿವೃದ್ಧಿಗೆ ಅನುದಾನ ಮೀಸಲಿಟ್ಟು ಕ್ರಮ ಕೈಗೊಳ್ಳಿ. ಫಲಾನುಭವಿ ಆಧಾರಿತ ಯೋಜನೆಗಳಲ್ಲಿ ಅರ್ಹರಿಗೆ ಯೋಜನೆ ತಲುಪಿಸುವಂತೆ ತಿಳಿಸಿದರು.
ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕಾವ್ಯಾರಾಣಿ, ಸಮಾಜ ಕಲ್ಯಾಣ ಇಲಾಝೆ ಉಪನಿರ್ದೇಶಕ ರಾಜು ತಳವಾರ, ತಹಸೀಲ್ದಾರ ವಿಠ್ಠಲ್ ಚೌಗಲಾ, ಕೊಪ್ಪಳ ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ್ ಇತರರಿದ್ದರು.