

ಕೊಪ್ಪಳ: ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿವ ನೀರು ಸಮರ್ಪಕವಾಗಿ ಪೂರೈಸಿ ಎಂದು ಡಿಸಿ ನಲಿನ್ ಅತುಲ್ ಸೂಚಿಸಿದರು.
ನಗರದ ಡಿಸಿ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ವಿವಿಧ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.
ಬರ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ. ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಪರಿಹಾರ ಕಲ್ಪಿಸಿ. ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಿ. ರ್ನಿಲಕ್ಷ$್ಯ ತೋರಿದರೆ ಶಿಸ್ತುಕ್ರಮ ಜರುಗಿಸಲಾಗುವುದು. ತಹಸೀಲ್ದಾರ್ಗಳು ಜಾಗ್ರತೆಯಿಂದ ಕೆಲಸ ನಿರ್ವಹಿಸಿ. ನಿಯಮಿತವಾಗಿ ತಾಲೂಕು ಮಟ್ಟದ ಸಭೆ ನಡೆಸಿ. ಕುಡಿವ ನೀರಿಗೆ ಸಮಸ್ಯೆ ಆಗಬಹುದಾದ ಗ್ರಾಮ, ನಗರ, ಪಟ್ಟಣ ವರದಿ ಸಿದ್ಧಪಡಿಸಿ ವರದಿ ಸಲ್ಲಿಸಿ. ಬೋರ್ವೆಲ್ ಸ್ಥಿತಿಗತಿ ಮಾಹಿತಿ ಇಟ್ಟುಕೊಳ್ಳಿ. ಖಾಸಗಿ ಬೋರ್ವೆಲ್ ಗುರುತಿಸಿ. ಜಾನುವಾರುಗಳಿಗೆ ಕುಡಿವ ನೀರು ಕೊರತೆ ಆಗದಂತೆ ನೋಡಿಕೊಳ್ಳಿ ಎಂದು ನಿರ್ದೇಶನ ನೀಡಿದರು.
ಜಾನುವಾರುಗಳು ರೈತರ ಆಸ್ತಿ. ಅವುಗಳಿಗೆ ಮೇವಿನ ಕೊರತೆ ಆಗದಂತೆ ಮುಂಜಾಗ್ರತೆವಹಿಸಿ. ಕೃಷಿ, ಪಶು ಇಲಾಖೆ ಹಾಗೂ ತಹಸೀಲ್ದಾರ್ಗಳು ಜಂಟಿ ಸಮೀೆ ನಡೆಸಿ. ರೈತರಲ್ಲಿರುವ ಮೇವಿನ ಲಭ್ಯತೆ, ಅವಶ್ಯಕತೆ ಹಾಗೂ ಉಳಿಕೆ ಮೇವಿನ ವಿವರದ ಮಾಹಿತಿ ಪಡೆದು ರೈತರ ಪಟ್ಟಿ ತಯಾರಿಸಿ. ಬೇಡಿಕೆಗನುಸಾರ ಮೇವು ಪೂರೈಕೆಗೆ ಹಾಗೂ ಮೇವು ಬ್ಯಾಂಕ್ ಸ್ಥಾಪನೆಗೆ ತ್ವರಿತ ಕ್ರಮ ಕೈಗೊಳ್ಳಿ. ರಯತರಿಂದ ಮೇವು ಖರೀದಿಸಲು ಅವಕಾಶವಿದ್ದು, ರೈತರಿಗೆ ಜಾಗೃತಿ ಮೂಡಿಸುವಂತೆ ಸೂಚಿಸಿದರು.
ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ಆದ್ಯತೆ ಮೇರೆಗೆ ಜಲಜೀವನ್ ಮಿಷಿನ್ ಮತ್ತು ಡಿಬಿಒಟಿ ದುರಸ್ಥಿಗೆ ಆದ್ಯತೆ ನೀಡಿ. ಡಿಬಿಒಟಿ ಹಾಗೂ ಜೆಜೆಎಂ ಮೂಲಕ ನೀರು ಪೂರೈಸಲು ತಾಪಂ ಇಒಗಳು ಕ್ರಮವಹಿಸುವಂತೆ ತಾಕೀತು ಮಾಡಿದರು. ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ, ಉಪ ವಿಭಾಗಾಧಿಕಾರಿ ಕ್ಯಾ. ಮಹೇಶ್ ಮಾಲಗಿತ್ತಿ ಇತರರಿದ್ದರು.