

ಕೊಪ್ಪಳ: ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಅ.6ರಂದು ಕೊಪ್ಪಳಕ್ಕೆ ಸಿಎಂ ಸಿದ್ದರಾಮಯ್ಯ ಬರುವರು. ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಬೇಕಿದ್ದು ನೀವೆಲ್ಲ ಜವಾಬ್ದಾರಿಯಿಂದ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಸಿಎಂ ಕಾರ್ಯಕ್ರಮಕ್ಕೆ ಅಗತ್ಯ ತಯಾರಿ ಮಾಡಿಕೊಳ್ಳಿ. ನಿಮ್ಮ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಲಾನುಭವಿಗಳಿಗೆ ಸಹಾಯಧನ, ಹಕ್ಕುಪತ್ರ, ಸೌಲಭ್ಯ ವಿತರಣೆ ಇದ್ದಲ್ಲಿ ಮಾಹಿತಿ ನೀಡಿ. ಸಂಬಂಧಿಸಿದ ಸಮಿತಿಗೆ ವರದಿ ಸಲ್ಲಿಸಿ. ಎಲ್ಲ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಪುಸ್ತಕ ರಚಿಸುತ್ತಿದ್ದು ತಂಡ ರಚಿಸಲಾಗಿದೆ. ನಿಮ್ಮ ಇಲಾಖೆಗಳ ಪ್ರಗತಿ ವರದಿ ಸಲ್ಲಿಸಿ ಎಂದು ನಿರ್ದೇಶಿಸಿದರು.
ಸ್ವಾಗತ, ವೇದಿಕೆ, ಶಿಷ್ಠಷಾರ, ಮೂಲ ಸೌಕರ್ಯ, ಆಹಾರ, ಆರೋಗ್ಯ, ಸಾರಿಗೆ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ಸಮಿತಿಗಳು ನಿಮ್ಮ ಜವಾಬ್ದಾರಿ ಸರಿಯಾಗಿ ನಿಭಾಯಿಸಿ. ಪಂಚ ಗ್ಯಾರಂಟಿ ಯೋಜನೆಗಳ ಲಾನುಭವಿಗಳು ಹಾಗೂ ಇತರ ಯೋಜನೆಗಳ ಲಾನುಭವಿಗಳನ್ನು ಕರೆತರಬೇಕು. ತಾಲೂಕುವಾರು ಲಾನುಭವಿಗಳ ಪಟ್ಟಿ ತಯಾರಿಸಿ. ಕರೆತರಲು ಅಗತ್ಯ ಸಾರಿಗೆ ಸೌಲಭ್ಯ ಕಲ್ಪಿಸಿ. ಪಾರ್ಕಿಂಗ್, ಸಾರ್ವಜನಿಕರಿಗೆ ಕುಡಿವ ನೀರು, ಆಹಾರ ವ್ಯವಸ್ಥೆ ಅಚ್ಚುಕಟ್ಟಾಗಿರಲಿ. ಅವಡಗಳಾದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆಂದು ಎಚ್ಚರಿಸಿದರು.
ಜಿಪಂ ಸಿಇಒ ವರ್ಣಿತ್ ನೇಗಿ, ಎಸ್ಪಿ ಡಾ.ರಾಮ್ ಎಲ್.ಅರಸಿದ್ದಿ, ಡಿಎ್ಒ ನಿರ್ಮಲಾ, ಎಡಿಸಿ ಸಿದ್ರಾಮೇಶ್ವರ, ಎಎಸ್ಪಿ ಹೇಮಂತ್ ಕುಮಾರ್, ಎಸಿ ಕ್ಯಾ.ಮಹೇಶ ಮಾಲಗಿತ್ತಿ, ಜಿಪಂ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಡಿಯುಡಿಸಿ ಪಿಡಿ ಮಂಜುನಾಥ ಗುಂಡೂರ ಇತರ ಇಲಾಖೆ ಅಧಿಕಾರಿಗಳಿದ್ದರು.