ಬಾಲ್ಯ ವಿವಾಹ ತಡೆಗೆ ಕ್ರಮ ಕೈಗೊಳ್ಳಿ

district koppal sslc exam prohibition order dc naleen athul
Published on

ಕೊಪ್ಪಳ: ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ಜರುಗದಂತೆ ಕ್ರಮ ಕೈಗೊಳ್ಳಲು ತಹಸೀಲ್ದಾರ್​ಗಳು, ತಾಒಂ ಇಒ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಡಿಸಿ ನಲಿನ್​ ಅತುಲ್​ ಸೂಚಿಸಿದ್ದಾರೆ.

ಮದುವೆ ಸೀಜನ್​ ಆರಂಭವಾಗಿದೆ. ಅಕ್ಷಯ ತೃತೀಯ ಸೇರಿ ವಿಶೇಷ ದಿನಗಳಂದು ಸಾಮೂಹಿಕ ಹಾಗೂ ವೈಯಕ್ತಿಕ ವಿವಾಹಗಳು ಹೆಚ್ಚು ಆಯೋಜನೆಯಾಗಲಿವೆ. ಈ ವೇಳೆ ಅಪ್ರಾಪ್ತರ ಮದುವೆ ಆಗುವ ಸಾಧ್ಯತೆ ಹೆಚ್ಚಿದೆ. ಬಾಲ್ಯವಿವಾಹ ನಿಷೇಧ ಕಾಯ್ದೆ ಅನ್ವಯ ಅಪ್ರಾಪ್ತರ ಮದುವೆ ಕಾನೂನು ಬಾಹಿರ. ಗ್ರಾಪಂ ಮಟ್ಟದಿಂದ ಹಿಡಿದು ಜಿಲ್ಲಾಮಟ್ಟದವರೆಗೆ ವಿವಿಧ ಅಧಿಕಾರಿಗಳಿಗೆ ಬಾಲ್ಯವಿವಾಹ ತಡೆವ ಅಧಿಕಾರವಿದೆ.

ಮದುವೆ ಹೆಸರಿನಲ್ಲಿ ಮಕ್ಕಳ ಮೇಲಾಗುವ ದೌರ್ಜನ್ಯ ತಡೆಗಟ್ಟಲು ಹಾಗೂ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತಗೊಳಿಸಲು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇಷ್ಟಾದರೂ ಅಪ್ರಾಪ್ತರ ಮದುವೆ ಹೆಚ್ಚುತ್ತಿವೆ. ಏ.30ರಂದು ಅಕ್ಷಯ ತೃತೀಯ ಇದ್ದು, ಅಧಿಕಾರಿಗಳು ಈ ಬಗ್ಗೆ ಎಚ್ಚರದಿಂದ ಇರಬೇಕು. ಮದುವೆಗಳ ಮೇಲೆ ನಿಗಾವಹಿಸಿ. ಜಿಲ್ಲಾ, ತಾಲೂಕು ಮತ್ತು ಗ್ರಾಪಂಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಕ್ರಮವಹಿಸುವಂತೆ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net