ಬಾಧಿತ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಿ, ಡಿಸಿ ನಲಿನ್​ ಅತುಲ್​ ಹೇಳಿಕೆ

district koppal dc naleen athul health meeting
Published on

ಕೊಪ್ಪಳ: ಜಿಲ್ಲೆಯ ಯಾವ ಭಾಗದಲ್ಲಿ ಕುಷ್ಠರೋಗ ಪ್ರಕರಣಗಳು ಕಾಣಿಸಿಕೊಳ್ಳುತ್ತವೆಯೋ ಅಲ್ಲಿ ಹೆಚ್ಚಾಗಿ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ನಲಿನ್​ ಅತುಲ್​ ಸೂಚಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಕುಷ್ಠ ಸಂಪೂರ್ಣ ವಾಸಿಯಾಗಬಲ್ಲ ರೋಗ. ಬೇಗ ಪತ್ತೆ ಮಾಡಿ ಸಕಾಲಕ್ಕೆ ಚಿಕಿತ್ಸೆ ಪಡೆದಲ್ಲಿ ವಾಸಿಯಾಗಲಿದೆ. ಈ ಬಗ್ಗೆ ರೋಗಿಗಳು ಹಾಗೂ ಅವರ ಕುಟುಂಬಕ್ಕೆ ಮನವರಿಕೆ ಮಾಡಿ. ಪ್ರಕರಣಗಳು ಕಾಣಿಸಿಕೊಂಡ ಪ್ರದೇಶಗಳಲ್ಲಿ ಹೆಚ್ಚಿನ ಅರಿವು ಕಾರ್ಯಕ್ರಮ ಮಾಡಿ. ರೋಗ ಲಕ್ಷಣ ಕಾಣಿಸಿಕೊಂಡವರು ತಕ್ಷಣ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಸಿಕೊಳ್ಳಿ. ಆಶ್ರಮ ಶಾಲೆ, ಹಾಸ್ಟೆಲ್​ಗಳಲ್ಲಿ ಕಾರ್ಯಕ್ರಮ ಮಾಡಿ. ಪ್ರಾರ್ಥನೆ ಸಮಯದಲ್ಲಿ ಮಕ್ಕಳಿಗೆ ತಿಳಿವಳಿಕೆ ಮೂಡಿಸಿ. ರೋಗಿಗಳಿಗೆ ಚಿಕಿತ್ಸೆ ಸೇರಿ ಇತರ ಸೌಲಭ್ಯಗಳು ಸರಿಯಾಗಿ ಸಿಗುವಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದರು.

ಜಿಲ್ಲಾ ಕುಷ್ಠರೋಗ ನಿಮೂರ್ಲನಾ ಅಧಿಕಾರಿ ಡಾ.ಪ್ರಕಾಶ ಎಚ್​. ಮಾತನಾಡಿ, ಜ.30ರಿಂದ ೆ.13ವರೆಗೆ ಸ್ಪರ್ಶ ಕುಷ್ಠರೋಗ ಜಾಗೃತಿ ಹಮ್ಮಿಕೊಳ್ಳಲಾಗಿದೆ. ಒಟ್ಟಾಗಿ ನಾವು ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸೋಣ, ತಪ್ಪು ಕಲ್ಪನೆಗಳನ್ನು ಹೋಗಲಾಡಿಸೋಣ ಮತ್ತು ಕುಷ್ಠರೋಗದಿಂದ ಬಾಧಿತರಾದ ಎಲ್ಲರನ್ನು ಹಿಂದುಳಿಯಂತೆ ನೋಡಿಕೊಳ್ಳೋಣ ಎಂಬುದು ಈ ವರ್ಷದ ಘೋಷವಾಕ್ಯ. ಪಾದ, ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ದೇಹದ ಮೇಲೆ ಸ್ಪರ್ಶಜ್ಞಾನವಿಲ್ಲದ ಮಚ್ಚೆಗಳು ಕಂಡುಬಂದಲ್ಲಿ ಪರೀಸಿಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಕುಷ್ಠರೋಗ ಜಾಗೃತಿ ಪೋಸ್ಟರ್​ ಬಿಡುಗಡೆಗೊಳಿಸಲಾಯಿತು. ಡಿಎಚ್​ಒ ಡಾ.ಲಿಂಗರಾಜು ಟಿ., ಜಿಲ್ಲಾ ಆರ್​ಸಿಎಚ್​ ಅಧಿಕಾರಿ ಡಾ.ಪ್ರಕಾಶ ವಿ., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ, ಜಿಲ್ಲಾ ಕ್ಷಯರೋಗ ನಿಮೂರ್ಲನಾಧಿಕಾರಿ ಡಾ.ಶಶಿಧರ ಎ., ಡಾ.ವೆಂಕಟೇಶ, ಡಾ.ರಾಮಾಂಜನೇಯ, ಡಾ.ಗೌರಿಶಂಕರ, ಡಾ.ಅಮರೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net