ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಪ್ರತಿಜ್ಞಾ ವಿಧಿ ಸ್ವೀಕಾರ

district koppal dc naleen athul helath department meeting
Published on

ಕೊಪ್ಪಳ: ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆ ಅಂಗವಾಗಿ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನದಡಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

ಜಿಲ್ಲಾಧಿಕಾರಿ ನಲಿನ್​ ಅತುಲ್​ ಹಾಗೂ ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್​ ರತ್ನಂ ಪಾಂಡೆಯ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಪ್ರತಿಜ್ಞೆ ಬೋಧಿಸಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವಾದ ಇಂದು ನನ್ನ ಕುಟುಂಬ, ನೆರೆ-ಹೊರೆ ಹಾಗೂ ಸಮುದಾಯದಲ್ಲಿ ಯಾರೇ ಕುಷ್ಠ ರೋಗಿಗಳು ಕಂಡು ಬಂದರೆ, ಅವರಿಗೆ ಆರೋಗ್ಯ ಇಲಾಖೆಯಲ್ಲಿ ದೊರೆಯುವ ಉಚಿತ ಚಿಕಿತ್ಸೆಯನ್ನು ಕೊಡಿಸುತ್ತೇನೆ. ಕುಫ್ಠಿರೋಗಿಗಳನ್ನು ಪ್ರೀತಿ ವಿಶ್ವಾಸದಿಂದ ನೋಡಿಕೊಂಡು ಅವರ ಆತ್ಮಗೌರಕ್ಕೆ ಧಕ್ಕೆ ಬರದಂತೆ ನಡೆದುಕೊಳ್ಳುತ್ತೇನೆ. ಕುಫ್ಟಿರೋಗಕ್ಕೆ ಅಂಟಿಕೊಂಡಿರುವ ಕಳಂಕ ಹಾಗೂ ತಾರತಮ್ಯವನ್ನು ಹೋಗಲಾಡಿಸಲು ಬದ್ದನಾಗಿರುತ್ತೇನೆ ಹಾಗೂ ಕುಫ್ಠಿರೋಗಿಗಳಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ಮಾಡಿಕೊಡುತ್ತೇನೆ. ಕುಫ್ಠಿರೋಗ ಸಂಪೂರ್ಣ ಗುಣಪಡಿಸಬಹುದಾದ ರೋಗ ಎಂಬ ಮಾಹಿತಿಯನ್ನು ಸಮಾಜದಲ್ಲಿ ನೀಡುತ್ತೇನೆ. ಮಹಾತ್ಮ ಗಾಂಧೀಜಿಯವರ ಕನಸಾದ ಕುಫ್ಠಿರೋಗ ಮುಕ್ತ ಭಾರತವನ್ನು ಕಟ್ಟಲು ಕಾಯಾ, ವಾಚಾ, ಮಾನಸ ಶ್ರಮಿಸುತ್ತೇನೆ ಎಂದು ಈ ಮೂಲಕ ಪ್ರತಿಜ್ಞೆ ಮಾಡುತ್ತೇವೆ ಎಂದು ಎಲ್ಲರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಜಿಲ್ಲಾ ಕುಫ್ಠಿರೋಗ ನಿಮೂರ್ಲನಾಧಿಕಾರಿ ಡಾ ಪ್ರಕಾಶ ಎಚ್​., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ನಂದಕುಮಾರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ, ಪಶು ಇಲಾಖೆ ಉಪನಿರ್ದೇಶಕ ಡಾ ಪಿ.ಎಂ.ಮಲ್ಲಯ್ಯ ಸೇರಿದಂತೆ ಇತರೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net