

ಕೊಪ್ಪಳ: ಸರ್ಕಾರಿ ಸೌಲಭ್ಯಗಳನ್ನು ಪೌರ ಕಾರ್ಮಿಕರಿಗೆ ಸಮಪರ್ಕವಾಗಿ ತಲುಪುವಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಸಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲ ನಗರ, ಸ್ಥಳಿಯ ಸಂಸ್ಥೆಗಳಲ್ಲಿನ ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು ಸರಿಯಾಗಿ ವೇತನ ಪಾವತಿಸಿ. ಇಎಸ್ಐ, ಪಿಎ್ ಪಾವತಿ ಬಗ್ಗೆ ಖಚಿತಪಡಿಸಿಕೊಳ್ಳಿ. ವರ್ಷಕ್ಕೆ ಎರಡು ಜೊತೆ ಸಮವಸ್ತ್ರ ನೀಡಿ. ಸುರಾ ಪರಿಕರಗಳಾದ ಮುಖ, ಕೈ ಗವಸು, ಬೂಟ್, ರೇನ್ ಕೋಟ್, ಹೆಲ್ಮೆಟ್ ವಿತರಿಸಿ. ನಿತ್ಯ ಬೆಳಗ್ಗೆ ಉಪಾಹಾರ ಒದಗಿಸಿ. ಆರೋಗ್ಯ ತಪಾಸಣೆ ನಿಯಮಿತವಾಗಿ ಮಾಡಿಸಿ. ವಿವಿಧ ಸರ್ಕಾರಿ ಸೌಲಭ್ಯಗಳನ್ನು ಒದಗಿಸುವಂತೆ ನಿರ್ದೇಶಿಸಿದರು.
ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಎಸ್ಪಿ ಡಾ.ರಾಮ್ ಎಲ್.ಅರಸಿದ್ದಿ, ಎಸಿ ಕ್ಯಾ.ಮಹೇಶ ಮಾಲಗಿತ್ತಿ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಡಿಯುಡಿಸಿ ಪಿಡಿ ರೇಷ್ಮಾ ಹಾನಗಲ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಅಜ್ಜಪ್ಪ ಸೊಗಲದ ಇತರರಿದ್ದರು.