ಮಹನಿಯರ ಜಯಂತಿ ಅರ್ಥಪೂರ್ಣವಾಗಿರಲಿ : ಡಿಸಿ ನಲಿನ್​ ಅತುಲ್​ ಸಲಹೆ

district koppal dc naleen athul meeting
Published on

ಕೊಪ್ಪಳ: ಡಾ.ಬಾಬು ಜಗಜೀವನರಾಮ್​ ಹಾಗೂ ಡಾ.ಬಿ.ಆರ್​.ಅಂಬೇಡ್ಕರ್​ ಜಯಂತಿ ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್​ ಅತುಲ್​ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕಳೆದ ವರ್ಷ ಚುನಾವಣೆ ಕಾರಣ ಜಯಂತಿ ಸರಳವಾಗಿ ಆಚರಿಸಲಾಗಿತ್ತು. ಈ ಭಾರಿ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸೋಣ. ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್​ ಅವರ 118ನೇ ಜಯಂತಿ ಏ.5 ರಂದು ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 8.30ಕ್ಕೆ ಬಾಬು ಜಗಜೀವನರಾಮ್​ ವೃತ್ತದಿಂದ ಭಾವಚಿತ್ರ ಮೆರವಣಿಗೆ ಆರಂಭಗೊಂಡು ಸಾಹಿತ್ಯ ಭವನದವರೆಗೆ ಸಾಗಲಿದೆ. ಮಧ್ಯಾಹ್ನ 12 ಗಂಟೆಗೆ ಸಾಹಿತ್ಯ ಭನವದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು, ವಿಶೇಷ ಉಪನ್ಯಾಸ ಹಾಗೂ ಇತರ ಕಾರ್ಯಕ್ರಮಗಳಿರಲಿವೆ ಎಂದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್​.ಅಂಬೇಡ್ಕರ್​ ಅವರ 134ನೇ ಜನ್ಮ ದಿನಾಚರಣೆ ಏ.14 ರಂದು ನಗರದ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿದೆ. ಬೆಳಗ್ಗೆ 8.30ಕ್ಕೆ ಅಂಬೇಡ್ಕರ್​ ವೃತ್ತದಿಂದ ಸಾಹಿತ್ಯ ಭವನದವರೆಗೆ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಸಾಹಿತ್ಯ ಭನವದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ. ಜಯಂತಿಯಂದು ಸಾಹಿತ್ಯ ಭವನ, ವೃತ್ತಗಳು ಮತ್ತು ರಸ್ತೆ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿವ ನೀರಿನ ವ್ಯವಸ್ಥೆ ಮಾಡಿ. ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿ, ಶಾಲಾ&ಕಾಲೇಜುಗಳಲ್ಲಿ ಜಯಂತಿ ಆಚರಿಸುವಂತೆ ಸೂಚಿಸಿದರು.

ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಉನ್ನತ ಶಿಕ್ಷಣದಲ್ಲಿ ಸಾಧನೆ ಮಾಡಿದ ಸಮುದಾಯ ವಿದ್ಯಾರ್ಥಿಗಳಿಗೆ ಸನ್ಮಾನಿಸುವುದರ ಜತೆಗೆ ಪದ್ಮಶ್ರೀ ಪುರಸತ ಭೀಮವ್ವ ಶಿಳ್ಳಿಕ್ಯಾತರ್​ ಅವರನ್ನು ಸನ್ಮಾನಿಸಿ. ಇಬ್ಬರೂ ನಾಯಕರ ಕುರಿತು ಶಾಲಾ&ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಪ್ರಬಂಧ ಮತ್ತು ವೇಷಭೂಷಣ ಸ್ಪರ್ಧೆಗಳನ್ನ ಏರ್ಪಡಿಸಲು ಕ್ರಮ ಕೈಗೊಳ್ಳಲು ತಿಳಿಸಿದರು.

ಎಡಿಸಿ ಸಿದ್ರಾಮೇಶ್ವರ, ಜಿಪಂ ಯೋಜನಾ ನಿರ್ದೇಶಕ ಪ್ರಕಾಶ ವಿ., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೋಗಲದ, ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ ಬಿರಾದಾರ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರನಳ್ಳಿ, ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ್​, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಬಸವರಾಜ, ಸಮುದಾಯ ಮುಖಂಡರಾದ ಗೂಳಪ್ಪ ಹಲಗೇರಿ, ಗಾಳೆಪ್ಪ ಪೂಜಾರ, ಸಿದ್ದೇಶ ಪೂಜಾರ, ಯಲ್ಲಪ್ಪ ಬಳಗಾನೂರ, ಸಿದ್ದರಾಮಪ್ಪ ಹೊಸಮನಿ, ಬಿ.ಜ್ಞಾನ ಸುಂದರ, ರಾಮಣ್ಣ ಕಂದಾರಿ, ಮಲ್ಲಿಕಾರ್ಜುನ ಪೂಜಾರ, ವಿವೇಕಾನಂದ ಕಟ್ಟಿಮನಿ, ಗವಿಸಿದ್ದಪ್ಪ ಬೆಲ್ಲದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net