ಕೊಪ್ಪಳ: ಜೂನ್ ಹಾಗೂ ಜುಲೈ ಮಾಹೆಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆಯಿಂದ ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವ ಮಹನೀಯರ ಜಯಂತಿಗಳ ಪೂರ್ವ ಸಿದ್ಧತೆ ಕುರಿತು ಚರ್ಚಿಸಲು ಜೂನ್ 18 ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ಜಿಲ್ಲಾ ಕೇಂದ್ರದಲ್ಲಿ ಜೂನ್ 27 ರಂದು ಶ್ರೀ ಕೆಂಪೇಗೌಡ ಜಯಂತಿ, ಜುಲೈ 2 ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನಾಚರಣೆಯ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಹಾಗೂ ಜುಲೈ 10 ರಂದು ಹಡಪದ ಅಪ್ಪಣ್ಣ ಜಯಂತಿಯನ್ನು ಆಚರಿಸಲಾಗುತ್ತದೆ. ಈ ಕುರಿತು ಪೂರ್ವಸಿದ್ದತೆ ಕೈಗೊಳ್ಳಲು ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರೊಂದಿಗೆ ಚರ್ಚಿಸಲು ಜೂ.18 ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ವಹಿಸಿಕೊಳ್ಳಲಿದ್ದು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಮುದಾಯಗಳ ಮುಖಂಡರು ಸಭೆಗೆ ತಪ್ಪದೇ ಹಾಜರಾಗಿ ತಮ್ಮ ಸಲಹೆಗಳನ್ನು ನೀಡಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ ತಿಳಿಸಿದ್ದಾರೆ.