ಮೂಲ ದಾಖಲಾತಿ ಪರಿಶೀಲನೆ ಜೂ.21 ರಂದು

Published on

ಕೊಪ್ಪಳ: ಕಲ್ಯಾಣ ಕರ್ನಾಟಕ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ 2 ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಜೂನ್​ 21 ರಂದು ಮೂಲ ದಾಖಲಾತಿ ಪರಿಶೀಲನೆ ನಡೆಯಲಿದೆ.

ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ನೇಮಕಾತಿ ಮಾಡುವ ಸಲುವಾಗಿ ರೋಸ್ಟರ್​ ಕಮ್​ ಮೆರಿಟ್​ ಆಧಾರದ ಮೇಲೆ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ತಯಾರಿಸಿ ಜಿಲ್ಲಾ ವೆಬ್​ಸೈಟ್​ www.koppal.nic.in ರಲ್ಲಿ ಪ್ರಕಟಿಸಲಾಗಿದೆ. ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯು ಜೂನ್​ 21 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 05.30 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಆಡಿಟೋರಿಯಂ ಹಾಲ್​, ಜಿಲ್ಲಾಡಳಿತ ಭವನ, ಕೊಪ್ಪಳದಲ್ಲಿ ನಡೆಯಲಿದೆ.

ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿದ ಸಂಬಂಧಪಟ್ಟ ಮೂಲ ಹಾಗೂ ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಲ್ಪಟ್ಟ ಒಂದು ಸೆಟ್​ ದಾಖಲಾತಿಗಳೊಂದಿಗೆ ಪರಿಶೀಲನೆಗೆ ಖುದ್ದಾಗಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವೆಬ್​ಸೈಟ್​ಗೆ ಭೇಟಿ ನೀಡಬಹುದು ಎಂದು ಜಿಲ್ಲಾಧಿಕಾರಿ ನಲಿನ್​ ಅತುಲ್​ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net