ಕೊಪ್ಪಳ: ಮತದಾರರ ಪಟ್ಟಿ ಪರಿಷ್ಕರಣೆ &2025ರ ಅಂಗವಾಗಿ ಜಿಲ್ಲಾಡಳಿತದಿಂದ ನ.9ರಿಂದ 24ವರೆಗೆ 2 ಮತ್ತು 4ನೇ ಶನಿವಾರ ಹಾಗೂ ಭಾನುವಾರದಂದು 5 ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ತಿಳಿಸಿದ್ದಾರೆ. ಕುಷ್ಟಗಿ, ಕನಕಗಿರಿ, ಗಂಗಾವತಿ, ಯಲಬುರ್ಗಾ, ಕೊಪ್ಪಳ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಅ.29ರಂದು ಪ್ರಕಟಿಸಲಾಗಿದೆ. ನ.9, 10, 23, 24ರಂದು ನಡೆಯಲಿದ್ದು ಬೂತ್ಗೆ ತೆರಳಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ, ಮಾರ್ಪಾಡು, ಬದಲಾವಣೆ ಹಾಗೂ ತೆಗೆದು ಹಾಕಲು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದೆಂದು ತಿಳಿಸಿದ್ದಾರೆ.