ಯುವಕರು ಸ್ವಾತಂತ್ರ್ಯ ಹೋರಾಟ ಇತಿಹಾಸ ಅರಿಯಲಿ : ಡಿಸಿ ಇಟ್ನಾಳ

district koppal dc suresh itnal indipendence day celebration
Published on

ಕೊಪ್ಪಳ: ಯುವ ಪೀಳಿಗೆ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳ ಮಹತ್ವವನ್ನು ತಿಳಿದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ್​ ಬಿ. ಇಟ್ನಾಳ ಹೇಳಿದರು.

ಶುಕ್ರವಾರ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.

ನಮ್ಮೆಲ್ಲರಿಗೂ ಗೊತ್ತಿರುವ ಹಾಗೆ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರ ಶ್ರಮದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಮಹಾತ್ಮಾ ಗಾಂಧೀಜಿ, ಜವಾಹರಲಾಲ್​ ನೆಹರು, ಸುಭಾಫ್​ಿ ಚಂದ್ರ ಬೋಸ್​, ಸರ್ದಾರ್​ ವಲ್ಲಭಭಾಯಿ ಪಟೇಲ್​, ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಬೇಗಂ ಹಜರತ್​ ಮಹಲ್​, ತಾತ್ಯಾ ಟೊಪಿ, ನಾನಾ ಸಾಹೇಬ್​, ಮಂಗಲ್​ ಪಾಂಡೆ, ಚಂದ್ರಶೇಖರ ಆಜಾದ್​, ಭಗತ್​ ಸಿಂಗ್​, ರಾಜಗುರು, ಖುದಿರಾಮ ಬೋಸ್​, ಸುಖ ದೇವ, ಹೀಗೆ ಸಹಸ್ರಾರು ಸ್ವಾತಂತ್ರ್ಯ ಹೋರಾಟಗಾರರ ಹೆಸರುಗಳು ಇತಿಹಾಸದಲ್ಲಿ ಅಜರಾಮರವಾಗಿವೆ ಎಂದರು.

ಜಿಪಂ ಸಿಇಒ ವರ್ಣಿತ್​ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿ.ಪಂ ಉಪ ಕಾರ್ಯದರ್ಶಿ ಟಿ.ಕೃಫ್ಣಿಮೂರ್ತಿ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಅಮೀನ್​ ಅತ್ತಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್​., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟೆಪ್ಪನವರ್​, ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ ಬಿರಾದರ್​, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯರಾದ ಕೃಫ್ಣಿಮೂರ್ತಿ ದೇಸಾಯಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net