

ಕೊಪ್ಪಳ: ಜಿಲ್ಲೆಯಲ್ಲಿನ ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ವೈಜ್ಞಾನಿಕವಾಗಿರಲಿ. ಯಾರೋಬ್ಬರೂ ಸರ್ವೇಯಿಂದ ಹೊರಗುಳಿಯದಂತೆ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಸೂಚಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸಮೀಕ್ಷೆ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಲಿಂಗತ್ವ ಅಲ್ಪಸಂಖ್ಯಾತರ ಮೂಲ ಸಮೀೆ ಸೆ.15ರಿಂದ 45 ದಿನಗಳವರೆಗೆ ನಡೆಯಲಿದೆ. ಇದರೊಟ್ಟಿಗೆ ದೇವದಾಸಿಯರ ಸಮೀೆಯೂ ಜರುಗುವುದು. ಎರಡನ್ನೂ ಅಚ್ಚುಕಟ್ಟಾಗಿ ನಿರ್ವಹಿಸಿ. 1993-94 ಮತ್ತು 2007-08ರಲ್ಲಿ ದೇವದಾಸಿ ಮಹಿಳೆಯರ ಸಮೀಕ್ಷೆ ನಡೆದಿದೆ. ಆ ಸಮೀಕ್ಷೆಯಲ್ಲಿ ಬಿಟ್ಟು ಹೋದವರು ಈ ಬಾರಿ ಹೆಸರು ಸೇರಿಸಬೇಕು. ಮರಣ ಹೊಂದಿದ್ದಲ್ಲಿ ಅವರ ಕುಟುಂಬದವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ನಿಖರ ಮಾಹಿತಿ ಒದಗಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರು ತಾಲೂಕು, ಜಿಲ್ಲಾಸ್ಪತ್ರೆಗೆ ತೆರಳಿ ನಿಖರ ಮಾಹಿತಿ ಒದಗಿಸಿ. ಅಧಿಕಾರಿಗಳು ಸಮೀೆಗೆ ಬೇಕಾದ ಸಿದ್ಧತೆ ಮಾಡಿಕೊಳ್ಳಿ ಎಂದು ನಿರ್ದೇಶಿಸಿದರು.
ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀೆ ಹಾಗೂ ದೇವದಾಸಿ ಮಹಿಳೆಯರ ಸಮೀೆ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ಜಿಪಂ ಸಿಇಒ ವರ್ಣಿತ್ ನೇಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ್, ಸಮಾಜ ಕಲ್ಯಾಣ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಯೋಜನಾಧಿಕಾರಿ ಪೂರ್ಣಿಮಾ ಏಳುಬಾವಿ, ದೇವದಾಸಿ ಮಹಿಳೆಯರ ಮರು ಸಮೀಕ್ಷೆ ರಾಜ್ಯ ಸಮಿತಿ ಸದಸ್ಯ ಚಂದಾಲಿಂಗಪ್ಪ ಕಲಾಲಬಂಡಿ ಇತರರಿದ್ದರು.