ಡೆಂಘೆ ನಿಯಂತ್ರಣ ಎಲ್ಲರ ಜವಾಬ್ದಾರಿ: ಸಿಇಒ ಪಾಂಡೆಯ ಹೇಳಿಕೆ

denge fever koppal ZP CEO Rahul DHO
ಕೊಪ್ಪಳದಲ್ಲಿ ಡೆಂಘೆ ನಿಯಂತ್ರಣ ಅಭಿಯಾನ ಅಂಗವಾಗಿ ಶುಕ್ರವಾರ ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ ಲಾರ್ವಾಹಾರಿ ಮೀನುಗಳ ಬಿಟ್ಟರು. ಡಿಎಚ್​ಒ ಡಾ.ಟಿ.ಲಿಂಗರಾಜು, ಜಿಲ್ಲಾ ಆರ್​ಸಿಎಚ್​ ಅಧಿಕಾರಿ ಡಾ.ಪ್ರಕಾಶ ವಿ., ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರನಾಥ ಎಂ.ಎಚ್​., ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ, ಟಿಎಚ್​ಒ ಡಾ.ರಾಮಾಂಜನೇಯ, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಶಿವಾನಂದ ಪೂಜಾರ ಇದ್ದರು.
Published on

ಕೊಪ್ಪಳ: ಡೆಂಘೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ. ಎಲ್ಲರೂ ಸಹಕರಿಸಬೇಕೆಂದು ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ ಮನವಿ ಮಾಡಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಶುಕ್ರವಾರ ಲಾರ್ವಾ ಮೀನುಗಳನ್ನು ಬಿಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈಡಿಸ್​ ಸೊಳ್ಳೆ ಉತ್ಪತ್ತಿ ತಾಣಗಳ ನಾಶಕ್ಕೆ ಪ್ರತಿ ಶುಕ್ರವಾರ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಸಮರ್ಪಕವಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಿ. ಡೆಂಘೆ ಜ್ವರ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಿ. ಈ ಬಗ್ಗೆ ಸಾರ್ವಜನಿಕರಿಗೆ ಸೂಕ್ತ ಅರಿವು ಮೂಡಿಸಿ. ಅಗತ್ಯ ಸುರಾ ಕ್ರಮಗಳನ್ನು ಅನುಸರಿಸಲು ಮನವಿ ಮಾಡುವಂತೆ ಸಲಹೆ ನೀಡಿದರು.

ಡಿಎಚ್​ಒ ಡಾ.ಟಿ.ಲಿಂಗರಾಜು ಮಾತನಾಡಿ, ಡೆಂಘೆ ಜ್ವರಕ್ಕೆ ಪ್ರಮುಖ ಕಾರಣವಾದ ಈಡಿಸ್​ ಸೊಳ್ಳೆಗಳ ನಿಯಂತ್ರಣ ಮಾಡಬೇಕಿದೆ. ಜಿಲ್ಲೆಯಲ್ಲಿರುವ ದೊಡ್ಡ ದೋಣಿಗಳು, ಕಲ್ಲು ಕ್ವಾರಿಗಳು, ಹೊಂಡಗಳು ಮತ್ತು ಮಳೆ ನೀರು ಸಂಗ್ರಹವಾಗುವ ಇತರ ಸ್ಥಳಗಳಲ್ಲಿ ಲಾರ್ವಾಹಾರಿ ಮೀನುಗಳನ್ನು ಬಿಡಲಾಗುತ್ತಿದೆ. ಈ ಲಾರ್ವಾಹಾರಿ ಮೀನುಗಳು ಈಡಿಸ್​ ಸೊಳ್ಳೆಗಳ ಮೊಟ್ಟೆಗಳನ್ನು ತಿಂದು ಅವುಗಳ ಸಂತಾನೋತ್ಪತ್ತಿಯನ್ನು ನಾಶ ಮಾಡುತ್ತವೆ ಎಂದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ವೆಂಕಟೇಶ ಕೆ. ಮಾತನಾಡಿ, ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್​ ಸೊಳ್ಳೆಗಳಿಂದ ಡೆಂಘೆ ಹರಡುತ್ತದೆ. ಸಾರ್ವಜನಿಕರು ಮನೆಯಲ್ಲಿರುವ ಸಿಮೆಂಟ್​ ತೊಟ್ಟಿ, ಡ್ರಂ, ಬ್ಯಾರೆಲ್​, ಬಕೆಟ್​ ಹಾಗೂ ಕೊಡಗಳಲ್ಲಿ ಅನಗತ್ಯ ನೀರು ಸಂಗಹ್ರವಾಗದಂತೆ ನೋಡಿಕೊಳ್ಳಿ. ಸ್ವಚ್ಛಗೊಳಿಸಿ ಮುಚ್ಚಿಡಿ. ವಾರಕ್ಕೊಮ್ಮೆಯಾದರೂ ಸ್ವಚ್ಛ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ಆರ್​ಸಿಎಚ್​ ಅಧಿಕಾರಿ ಡಾ.ಪ್ರಕಾಶ ವಿ., ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರನಾಥ ಎಂ.ಎಚ್​., ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ, ಟಿಎಚ್​ಒ ಡಾ.ರಾಮಾಂಜನೇಯ, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಶಿವಾನಂದ ಪೂಜಾರ, ರಮೇಶ್​ ಸೆರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net