

ಕೊಪ್ಪಳ: ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆಯಿಂದ ನಗರದ ಜಿಲ್ಲಾ ಬೋಧಕ ಆಸ್ಪತ್ರೆಯಲ್ಲಿ ಇತ್ತೀಚೆಗೆ ವಿಶ್ವ ಪಾರ್ಶ್ವವಾಯು ದಿನಾಚರಣೆ ಹಮ್ಮಿಕೊಳ್ಳಲಾಯಿತು. ವೈದ್ಯ ಆನಂದ ಚೌವ್ಹಾಣ್ ಕಾರ್ಯಕ್ರಮ ಉದ್ಘಾಟಿಸಿ, ಮೆದುಳಿನ ಆರೋಗ್ಯ ಬಗ್ಗೆ ಎಲ್ಲರೂ ಜಾಗೃತೆವಹಿಸಿ. ಪಾರ್ಶ್ವವಾಯು, ತಲೆನೋವು, ಮರೆವಿನ ಕಾಯಿಲೆ ಸೇರಿ ಇತರ ನರರೋಗ ಸಮಸ್ಯೆ ಬಗ್ಗೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಿರಿ ಎಂದರು. ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಮಾತನಾಡಿದರು. ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ, ಸಿಬ್ಬಂದಿ ಇದ್ದರು.