ಕುಡಿವ ನೀರು ಸಮಸ್ಯೆ ಆಗದಿರಲಿ:ತಹಸೀಲ್ದಾರ್ ವಿಠ್ಠಲ್ ಚೌಗಲಾ

district koppal drinking water koppal taluku tahasildara
Published on

ಕೊಪ್ಪಳ: ಬೇಸಿಗೆ ಆರಂಭವಾಗಿದ್ದು, ಗ್ರಾಮೀಣ, ನಗರ ಪ್ರದೇಶದಲ್ಲಿ ಕುಡಿವ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ ಎಂದು ತಹಸೀಲ್ದಾರ್ ವಿಠ್ಠಲ್ ಚೌಗಲಾ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಎಲ್ಲ ಅಧಿಕಾರಿಗಳು ಅರ್ಲಟ್ ಆಗಿರಿ. ಎಲ್ಲೇ ಸಮಸ್ಯೆ ಬಂದರೂ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಿ. ನಿಯಮಿತವಾಗಿ ಕುಡಿವ ನೀರಿನ ಮೂಲ ಪರೀೆಗೊಳಪಡಿಸಿ. ಪೈಪ್ಲೈನ್ ಒಡೆದು ಕಲುಷಿತ ನೀರು ಕುಡಿವ ನೀರಿನೊಡನೆ ಬೆರೆಯದಂತೆ ನೋಡಿಕೊಳ್ಳಿ. ಮುಂಜಾಗ್ರತ ಕ್ರಮವಾಗಿ ಖಾಸಗಿ ಬೋರ್ವೆಲ್ ಗುರುತಿಸಿಟ್ಟುಕೊಳ್ಳಿ. ಅಗತ್ಯ ಬಿದ್ದಲ್ಲಿ ತಕ್ಷಣ ಬಾಡಿಗೆ ಪಡೆದು ನೀರು ಪೂರೈಸಿ. ಬೋರ್ವೆಲ್ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಿ. ಗ್ರಾಮೀಣ ಹಾಗೂ ನಗರ ಪ್ರದೇಶ ಎಲ್ಲೆ ಸಮಸ್ಯೆ ಕಾಣಿಸಿಕೊಂಡರೂ ತಕ್ಷಣ ಸ್ಪಂದಿಸಬೇಕು. ರ್ನಿಲಕ್ಷ$್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗವುದೆಂದು ಎಚ್ಚರಿಸಿದರು.

ತಾಪಂ ಇಒ ದುಂಡಪ್ಪ ತುರಾದಿ ಮಾತನಾಡಿ, ತಾಲೂಕು ವ್ಯಾಪ್ತಿಯ 8 ಗ್ರಾಪಂನ 11 ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. 14 ಖಾಸಗಿ ಬೋರ್ವೆಲ್ ಬಾಡಿಗೆ ಪಡೆದು ನೀರು ಪೂರೈಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ 338 ಖಾಸಗಿ ಬೋರ್ವೆಲ್ ಗುರುತಿಸಲಾಗಿದೆ. ಗ್ರಾಪಂ ಅಧಿಕಾರಿಗಳಿಗೆ ಬೋರ್ವೆಲ್ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸೂಚಿಸಲಾಗಿದೆ. ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಮಾಡಿದ್ದು, ಏಪ್ರೀಲ್ ಮಾಸಾಂತ್ಯದವರೆಗೆ 11 ಮತ್ತು ಮೇ ಮಾಸಾಂತ್ಯಕ್ಕೆ 13 ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಉದ್ಭವಿಸಬಹುದೆಂದು ಅಂದಾಜಿಸಲಾಗಿದೆ ಎಂದು ವಿವರಿಸಿದರು.

ನಗರಸಭೆ, ಭಾಗ್ಯನಗರ ಪಪಂ ಹಾಗೂ ಪಿಡಿಒಗಳು, ಕಂದಾಯ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net