ಸ್ಟ್ರಾಂಗ್​ ರೂಮ್​ ಪರಿಶೀಲಿಸಿದ ಅಧಿಕಾರಿಗಳು

district koppal election commissioner visits strong room in koppal ls polls
election commissioner visits strong room in koppal ls polls
ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಕೂಮಾರ್ರಾವ್​ ಎಂ. ಗುರುವಾರ ಕೊಪ್ಪಳದ ಗವಿಸಿದ್ದೇಶ್ವರ ಮಹಾವಿದ್ಯಾಲಯದ ಸ್ಟ್ರಾಂಗ್​ ರೂಮ್​ಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ನಲಿನ್​ ಅತುಲ್​, ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ, ಎಡಿಸಿ ಸಾವಿತ್ರಿ ಕಡಿ ಇದ್ದರು.
Published on

ಕೊಪ್ಪಳ: ಚುನಾವಣಾ ಆಯೋಗದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಕೂಮಾರ್ರಾವ್​ ಎಂ. ಗುರುವಾರ ನಗರದ ಗವಿಸಿದ್ದೇಶ್ವರ ಮಹಾವಿದ್ಯಾಲಯದ ಸ್ಟ್ರಾಂಗ್​ ರೂಮ್​ಗೆ ಭೇಟಿ ನೀಡಿ ಪರಿಶೀಲಿಸಿದರು.

ಸ್ಟ್ರಾಂಗ್​ ರೂಮ್​ ಭದ್ರತೆ, ಸಿಸಿ ಕ್ಯಾಮೆರಾ ಅಳವಡಿಕೆ, ಕಾರ್ಯನಿರ್ವಹಣೆ, ಭದ್ರತಾ ಸಿಬ್ಬಂದಿ ನಿಯೋಜನೆ ಬಗ್ಗೆ ಪರಿಶೀಲಿಸಿದರು. ಹೆಚ್ಚಿನ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಇನ್ನಷ್ಟು ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಸೂಚಿಸಿದರು. ಜಿಲ್ಲಾಧಿಕಾರಿ ನಲಿನ್​ ಅತುಲ್​, ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ, ಎಡಿಸಿ ಸಾವಿತ್ರಿ ಕಡಿ, ಸಹಾಯಕ ಆಯುಕ್ತ ಕ್ಯಾ.ಮಹೇಶ ಮಾಲಗಿತ್ತಿ, ಡಿವೈಎಸ್ಪಿ ಮುತ್ತಣ್ಣ ಸರವಗೋಳ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net