ಕೊಪ್ಪಳ: ತನ್ನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ ಜೀವಾವಧಿ ಶಿಕ್ಷೆ ಹಾಗೂ 80 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ (ಪೋಕ್ಸೊ) ನ್ಯಾಯಾಲಯ ಆದೇಶಿಸಿದೆ.
ಕೊಪ್ಪಳ ತಾಲೂಕಿನ ವೆಂಕಟಾಪುರ ಗ್ರಾಮದ ಯಂಕಪ್ಪ ಗೊಲ್ಲರ ಶಿೆಗೆ ಗುರಿಯಾದಾತ. ಕೆಲ ವರ್ಷಗಳ ಹಿಂದೆ ಗುಡ್ಡಕ್ಕೆ ತನ್ನ ಅಪ್ರಾಪ್ತ ಮಗಳನ್ನು ಕರೆದೊಯ್ದಿದ್ದ. ಕುಡಿದ ಅಮಲಿನಲ್ಲಿ ಅತ್ಯಾಚಾರ ಎಸಗಿ ವಿಷಯ ತಿಳಿಸಿದರೆ ಸಾಯುಸುವುದಾಗಿ ಬೆದರಿಕೆ ಹಾಕಿದ್ದ. 2020ರ ಜೂನ್ 18ರಂದು ಬಾಲಕಿ ಹೊಟ್ಟೆ ನೋವು ಎಂದು ಗಂಗಾವತಿ ಆಸ್ಪತ್ರೆಗೆ ದಾಖಲಾಗಿದ್ದು, ಜೂನ್ 19ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡು ಪಿಎಸ್ಐ ಸುರೇಶ ಡಿ., ಸಿಪಿಐ ರವಿ ಉಕ್ಕುಂದ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ಕುಮಾರ ಡಿ.ಕೆ. ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿೆ ಹಾಗೂ 80 ಸಾವಿರ ರೂ. ದಂಡ ವಿಧಿಸಿ ಏ.17ರಂದು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದಾರೆ.