ಕೊಪ್ಪಳ: ಅಂಜನಾದ್ರಿ ಬೆಟ್ಟದಲ್ಲಿ ಪೂಜೆ ಸಲ್ಲಿಕೆಗೆ ಅನುವು ಮಾಡಿಕೊಡಲು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಹನುಮನ ಜನ್ಮಸ್ಥಳ ಅಂಜನಾದ್ರಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವಶದಲ್ಲಿರಿಸಿಕೊಂಡಿದೆ. ದೇವಸ್ಥಾನದ ಮುಖ್ಯ ಅರ್ಚಕ ವಿದ್ಯಾದಾಸ್ ಬಾಬಾ ತಮಗೆ ಪೂಜೆಗೆ ಅವಕಾಶ ನೀಡುತ್ತಿಲ್ಲವೆಂದು ಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ದೀಪಂಕರ್ ದತ್ತ ಅವರಿದ್ದ ಪೀಠ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ವಿವಾದದ ಕುರಿತು ಹೈಕೋರ್ಟ್ ನೀಡಿದ ಆದೇಶ ಪಾಲಿಸಬೇಕು. ವಿದ್ಯಾದಾಸ್ ಬಾಬಾ ಅವರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು. ದೇವಸ್ಥಾನದಲ್ಲಿ ಉಳಿಯಲು ಅವಕಾಶ ನೀಡಬೇಕೆಂದು ಸೂಚಿಸಿದೆ.
2018ವರೆಗೂ ದೇವಾಲಯ ಟ್ರಸ್ಟ್ ಅಡಿಯಲ್ಲಿತ್ತು. ವಿದ್ಯಾದಾಸ್ ಬಾಬಾ ಅರ್ಚಕರಾಗಿದ್ದರು. ಕಾನೂನು ಸಮಸ್ಯೆ ಆಗಿದ್ದರಿಂದ ಸರ್ಕಾರ ಮುಜರಾಯಿ ಇಲಾಖೆ ವ್ಯಾಪ್ತಿಗೆ ವಶಪಡಿಸಿಕೊಂಡಿದೆ.