ಗವಿಮಠ ಕಾಯಕ ದೇವೋಭವ ಜಾಗೃತಿ ಅಭಿಯಾನ ಅಂಗವಾಗಿ ಭಾಷಣ ಸ್ಪರ್ಧೆ

Gavimath kayaka devobhava program speech competition for students
Published on

ಕೊಪ್ಪಳ: ಗವಿಮಠದಿಂದ ಈ ಬಾರಿ ಹಮ್ಮಿಕೊಂಡಿರುವ ಕಾಯಕ ದೇವೋಭವ ಜಾಗೃತಿ ಅಭಿಯಾನ ಜ.24ರಂದು ನಡೆಯಲಿದೆ. ಅದರ ಅಂಗವಾಗಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸ್ವಯಂ ಉದ್ಯೋಗದಿಂದ ಸ್ವಾವಲಂಬಿ ಬದುಕು ಎಂಬ ವಿಷಯ ಕುರಿತು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ.

ಸ್ಥಳಿಯ ಮಟ್ಟದಲ್ಲಿ ಆಯ್ಕೆಯಾಗಿ ಪ್ರಥಮ ಸ್ಥಾನ ಪಡೆದ ಸರ್ಕಾರಿ, ಅನುದಾನಿತ, ಖಾಸಗಿ ಪ್ರೌಢಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಜ.13ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಶ್ರೀಗವಿಸಿದ್ಧೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ವಿಜೇತರಾದ ವಿದ್ಯಾರ್ಥಿಗಳಿಗೆ ಜ.24ರಂದು ಜಾಥಾ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು. ಮಾಹಿತಿಗಾಗಿ 9742307153, 9986591076 ಸಂಪರ್ಕಿಸಲು ಗವಿಮಠ ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net