

ಕೊಪ್ಪಳ: ಸರ್ಕಾರಿ ನೌಕರರು ಸರ್ಕಾರದ ನಿಜವಾದ ಕಸ್ಟೋಡಿಯನ್ಗಳು. ನೀವು ಪರಿಣಾಮಕಾರಿಯಾಗಿ ಕೆಲಸ ಮಾಡಿದಾಗ ಸಮಾಜ ಅಭಿವೃದ್ಧಿ ಜತೆಗೆ ಸರ್ಕಾರಕ್ಕೆ ಉತ್ತಮ ಹೆಸರು ಬರಲಿದೆ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸವೋರ್ತ್ತಮ ಸೇವಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜನರ ಸೇವೆ ದೇವರ ಸೇವೆಯಂತೆ. ನಮ್ಮ ದೇಶದಲ್ಲಿ ಅಧಿಕ ಜನಸಂಖ್ಯೆ, ಬಡತನ ಕಾರಣ ಹಲವು ಅಭಿವೃದ್ಧಿ ಕಾರ್ಯ ಮಾಡಬೇಕಿದೆ. ಆಡಳಿತದಲ್ಲಿ ಪ್ರಾಮಾಣಿಕತೆ ಅಗತ್ಯ. ಎಲ್ಲರಿಗೂ ಶಿಕ್ಷಣ ದೊರೆಯುವಂತೆ ಮಾಡಬೇಕು. ಶಿಕ್ಷಣ, ಅಬಕಾರಿ, ಗಣಿ ಮತ್ತು ಭೂ ವಿಜ್ಞಾನ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗಳಲ್ಲಿ ಕೌನ್ಸಲಿಂಗ್ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಈ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಾಗುತ್ತಿದೆ. ಹಿಂದುಳಿದ ಭಾಗಗಳಲ್ಲಿ ಅಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ವಿಪ ಸದಸ್ಯೆ ಹೇಮಲತಾ ನಾಯಕ ಮಾತನಾಡಿ, ನೌಕರರು ತಮ್ಮ ವೈಯಕ್ತಿಕ ಜೀವನ ಬದಿಗಿಟ್ಟು ಜೀವನವಿಡಿ ಜನರ ಸೇವೆ ಮಾಡುತ್ತಾರೆ. ಜನರು ಸಮಸ್ಯೆ ಹೊತ್ತು ಬಂದಾಗ ನೀವು ಸರಿಯಾಗಿ ಸ್ಪಂದಿಸಿ. ಜಿಲ್ಲೆ ಅಭಿವೃದ್ಧಿಗೆ ಶ್ರಮಿಸಿ ಎಂದರು.
ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಮಾತನಾಡಿ, ದೇಶ, ರಾಜ್ಯ ಆರ್ಥಿಕ ಅಭಿವೃದ್ಧಿಯಲ್ಲಿ ನೌಕರರ ಪಾತ್ರ ಬಹುಮುಖ್ಯ. ನಮ್ಮ ಜಿಲ್ಲೆಯಲ್ಲಿ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ನಾವು ಸರಿಯಾಗಿ ಸ್ಪಂದನೆ ಮಾಡಬೇಕೆಂದರು.
ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ನೌಕರರು ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳಬೇಕು. ಸರಿಯಾದ ಸಮಯಕ್ಕೆ ಕಚೇರಿಗೆ ಹೋಗಬೇಕು. ಜನರು ತಮ್ಮ ಸಮಸ್ಯೆಗಳನ್ನು ತೆಗೆದುಕೊಂಡು ಬಂದಾಗ ಸೌಜನ್ಯದಿಂದ ಸ್ಪಂದಿಸಬೇಕು. ನಾವು ಮಾಡುವ ಕೆಲಸದ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಇರಬೇಕು ಎಂದು ಕಿವಿಮಾತು ಹೇಳಿದರು.
ಸಿಂಧನೂರಿನ ಶ್ರೀಕೃಷ್ಣ ದೇವರಾಯ ವಿದ್ಯಾ ಸಂಸ್ಥೆ ಪ್ರಾಚಾಯೆರ್ ಚಂದ್ರಕಲಾ ಪ್ರಕಾಶ ವೃತ್ತಿ ಜೀವನದಲ್ಲಿ ಒತ್ತಡ ನಿರ್ವಹಣೆ ವಿಷಯ ಕುರಿತು ಉಪನ್ಯಾಸ ನೀಡಿದರು. ಎಡಿಸಿ ಸಿದ್ರಾಮೇಶ್ವರ ಎಸಿ ಕ್ಯಾ.ಮಹೇಶ ಮಾಲಗಿತ್ತಿ, ಜಿಲ್ಲಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ, ಪ್ರಾಥಮಿಕ ಶಾಲಾ- ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣ ಬಸನಗೌಡ ಪಾಟೀಲ್ ಇತರರಿದ್ದರು.
ಅಧಿಕಾರಿಗಳಿಗೆ ಸನ್ಮಾನ
2023&24ನೇ ಸಾಲಿನ ರಾಜ್ಯ ಸವೋರ್ತ್ತಮ ಪ್ರಶಸ್ತಿಗೆ ಆಯ್ಕೆಯಾದ ಟ್ಟಿರಡ್ಡಿಹಾಳ ಗ್ರಾಮ ಆಡಳಿತಾಧಿಕಾರಿ ಮಲ್ಲಮ್ಮ ಹೆಬ್ಬಾಳ, ಜಿಲ್ಲಾ ಸವೋರ್ತ್ತಮ ಪ್ರಶಸ್ತಿಗೆ ಆಯ್ಕೆಯಾದ ಡಿಎಚ್ಒ ಡಾ.ಲಿಂಗರಾಜು ಟಿ., ಜಿಲ್ಲಾ ಖಜಾನೆ ಉಪನಿರ್ದೇಶಕ ಕೆ.ಸುರೇಶ, ಜಿಪಂ ಲೆಕ್ಕ ಅಧೀಕ್ಷಕ ಅಡವಿ ಅಶೋಕ, ಡಿಸಿ ಕಚೇರಿ ಶಿರಸ್ತೇದಾರ ಸತೀಶ್ ಕುಮಾರ, ಯಲಬುರ್ಗಾ ತಹಸೀಲ್ದಾರ ಕಚೇರಿ ಶಿರಸ್ತೇದಾರ ದೇವರಡ್ಡಿ ಮೂಲಿಮನಿ, ಜಿಲ್ಲಾ ಲಸಿಕಾ ಉಗ್ರಾಣದ ಫಾರ್ಮಸಿ ಅಧಿಕಾರಿ ವಸಂತ ಬೆಲ್ಲದ, ತಳಕಲ್ ಗ್ರಾಪಂ ಪಿಡಿಒ ವೀರನಗೌಡ ಚನ್ನವಿರನಗೌಡ, ಬೂದಗುಂಪಾ ಗ್ರಾಮ ಆಡಳಿತಾಧಿಕಾರಿ ರಮೇಶ ನಾಯ್ಕ, ಭಾಗ್ಯನಗರ ಪಪಂ ಹಿರಿಯ ಆರೋಗ್ಯ ನಿರೀಕ್ಷಕ ಪರಶುರಾಮ ಮಹೇಂದ್ರಕರ, ಡಿಎಚ್ಒ ಕಚೇರಿ ಕಿರಿಯ ಆರೋಗ್ಯ ಸಹಾಯಕ ರವಿನಾಗೇಶ ಅವರನ್ನು ಸನ್ಮಾನಿಸಲಾಯಿತು.