ನೌಕರರ ಕಾರ್ಯ ಶ್ಲಾನೀಯ, ಸಂಸದ ರಾಜಶೇಖರ ಹಿಟ್ನಾಳ ಅಭಿಮತ

district koppal govt employees association sports mp rajashekhar hitnala
Published on

ಕೊಪ್ಪಳ: ಅಗತ್ಯಕ್ಕಿಂತ ಕಡಿಮೆ ಹುದ್ದೆಗಳು ಇದ್ದರೂ ಇರುವ ನೌಕರರೇ ಜವಾಬ್ದಾರಿ ನಿಭಾಯಿಸುತ್ತಿದ್ದೀರಿ. ಅಭಿವೃದ್ಧಿ ಕೆಲಸಗಳಿಗೆ ಸರ್ಕಾರಕ್ಕೆ ಬೆಂಬಲವಾಗಿ ನಿಂತಿದ್ದು ನಿಮ್ಮ ಕರ್ತವ್ಯ ಶ್ಲಾನೀಯ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂದಿಂದ ಶನಿವಾರ ಹಮ್ಮಿಕೊಂಡಿದ್ದ ಕ್ರೀಡಾಕೂಟ ಹಾಗೂ ಸಾಂಸತಿಕ ಸ್ಪರ್ಧೆಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನೌಕರರು ಒತ್ತಡದಲ್ಲಿದ್ದಾರೆ. ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಮನಸ್ಸು ಹಗುರವಾಗಲಿದೆ. ಒತ್ತಡ ನಿವಾರಿಸಬಹುದು. ಶೇ.60ರಷ್ಟು ನೌಕರರಿದ್ದರೂ ಶೇ.100ರಷ್ಟು ಕೆಲಸ ಮಾಡುತ್ತಿದ್ದೀರಿ. ಅಭಿವೃದ್ಧಿಯಲ್ಲಿ ನಿಮ್ಮ ಪಾತ್ರ ಬಹುಮುಖ್ಯ ಎಂದರು.

ನಗರಸಭೆ ಅಧ್ಯಕ್ಷ ಅಮ್ಜದ್​ ಪಟೇಲ್​ ಮಾತನಾಡಿ, ನೌಕರರಿಗಾಗಿ ಕ್ರೀಡಾಕೂಟ ಆಯೋಜಿಸುತ್ತಿರುವುದು ಉತ್ತಮ ಕೆಲಸ. ನಗರಸಭೆ ಬರುವ ಬಜೆಟ್​ನಲ್ಲಿ ನೌಕರರ ಕ್ರೀಡಾಕೂಟಕ್ಕೆ ಒಂದು ಲಕ್ಷ ರೂ. ಅನುದಾನ ಮೀಡಲಾಗುವುದು, ಕಡಿಮೆ ದರದಲ್ಲಿ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ಕ್ರೀಡಾಪಟುಗಳನ್ನು ಗೌರವಿಸಲಾಯಿತು.

ನಗರಸಭೆ ಸದಸ್ಯ ವಿರುಪಾಕ್ಷಪ್ಪ ಮೋರನಾಳ, ಡಿಸಿ ನಲಿನ್​ ಅತುಲ್​, ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ, ಎಸ್ಪಿ ಡಾ.ರಾಮ್​ ಎಲ್​.ಅರಸಿದ್ದಿ, ಡಿಎಚ್​ಒ ಡಾ.ಟಿ.ಲಿಂಗರಾಜು, ಅಬಕಾರಿ ಉಪ ಆಯುಕ್ತ ಪ್ರಶಾಂತಕುಮಾರ್​ ಕೆ., ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್​ ಜಾಬಗೌಡರ್​, ನೌಕರರ ಸಂದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮನವರ, ಸಂದ ಜಿಲ್ಲಾ, ತಾಲೂಕು ಪದಾಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net