ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಆ.10ರಂದು

Published on

ಕೊಪ್ಪಳ: ರಾಜ್ಯ ಸರ್ಕಾರಿ ನೌಕರರ ಮಕ್ಕಳು 2024&-25 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತರಿಗೆ ಆ.10ರಂದು ಬೆಳಗ್ಗೆ 10 ಗಂಟೆಗೆ ಸಿಂಧನೂರಿನ ಸತ್ಯಗಾರ್ಡನ್​ನಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

ಕೊಪ್ಪಳ, ಬಳ್ಳಾರಿ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳ ಸರ್ಕಾರಿ ನೌಕರರ ಮಕ್ಕಳಿಗೆ ಸನ್ಮಾನಿಸಲಾಗುವುದು. ಕೊಪ್ಪಳದಿಂದ ಎಸ್ಸೆಸ್ಸೆಲ್ಸಿಯಲ್ಲಿನ 101ಹಾಗೂ ಪಿಯುಸಿಯಲ್ಲಿನ 73ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಇರಲಿದೆ. ಎಮ್ಮಿಗನೂರಿನ ಸಾವಿರದೇವರ ಸಂಸ್ಥಾನಮಠದ ವಾಮದೇವ ಮಹಾಂತ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯವಹಿಸಲಿದ್ದಾರೆ. ಪದ್ಮಶ್ರೀ ಭೀಮವ್ವ ಶಿಳ್ಳಿಕ್ಯಾತರ ಕಾರ್ಯಕ್ರಮ ಉದ್ಘಾಟಿಸುವರು. ನೌಕರರ ಸಂದ ರಾಜ್ಯಾಧ್ಯಕ್ಷ ಸಿ.ಎಸ್​.ಷಡಾಕ್ಷರಿ ಸೇರಿ ಇತರ ಗಣ್ಯರು ಭಾಗಿಯಾಗುವರು. ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಕಾರ್ಯಕ್ರಮಕ್ಕೆ ಆಗಮಿಸುವಂತೆ ಸಂದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮಣ್ಣನವರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net