

ಕೊಪ್ಪಳ: ಜಿಲ್ಲೆಯ ಎರಡು ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಮೇ 25 ರಂದು ಉಪ ಚುನಾವಣೆ ನಡೆಯಲಿದೆ. ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತ ಮತದಾನ ನಡೆಸಲು ಗ್ರಾಪಂ ವ್ಯಾಪ್ತಿಯ ಎಲ್ಲ ಸಂತೆ-, ಜಾತ್ರೆಗಳನ್ನು ರದ್ದುಪಡಿಸಿ ಡಿಸಿ ನಲಿನ್ ಅತುಲ್ ಆದೇಶಿಸಿದ್ದಾರೆ.
ಕೊಪ್ಪಳ ತಾಲೂಕಿನ ಕವಲೂರು ಗ್ರಾಪಂ, ಯಲಬುರ್ಗಾ ತಾಲೂಕಿನ ಗಾಣಧಾಳ ಗ್ರಾಪಂನಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆ ದಿನದಂದು ಸಂಬಂಧಿಸಿದ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಂತೆ-, ಜಾತ್ರೆ ಗಳನ್ನು ನಡೆಸಬಾರದು. ಗ್ರಾಪಂ ವ್ಯಾಪ್ತಿಯ ರೈತರು, ಗಣ್ಯವ್ಯಕ್ತಿಗಳು ಹಾಗೂ ಇತರರು ಹೊಂದಿರುವ ಶಸ್ತ್ರಗಳನ್ನು ಪೊಲೀಸ್ ಠಾಣೆಗಳಲ್ಲಿ ಠೇವಣಿ ಮಾಡುವಂತೆ ತಿಳಿಸಿದ್ದಾರೆ.