ಅರ್ಹರಿಗೆ ಯೋಜನೆ ತಲುಪಿಸಿ

Published on

ಕೊಪ್ಪಳ: ಎಲ್ಲ ಅರ್ಹ ಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ. ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಸರಿಪಡಿಸಿ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷ ಬಾಲಚಂದ್ರನ್​ ಹೇಳಿದರು.

ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಗೃಹ ಲಕ್ಷಿ$್ಮ ಯೋಜನೆಯಡಿ ಕೆಲವರಿಗೆ ಹಣ ಬರುತ್ತಿಲ್ಲ. ಆಧಾರ್​, ಬ್ಯಾಂಕ್​ ಸೇರಿ ಇತರ ಸಮಸ್ಯೆಗಳನ್ನು ಹೇಳುತ್ತಿದ್ದಾರೆ. ಕೆಲವರಿಗೆ ಮೊದಲು ಹಣ ಬಂದಿದ್ದು, ನಂತರ ಬರುತ್ತಿಲ್ಲವೆಂಬ ಆರೋಪಗಳಿವೆ. ಏನೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ತಕ್ಷಣ ಸರಿಪಡಿಸಿ. ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿ ಎಂದು ಸೂಚಿಸಿದರು.

ಅನ್ನಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷಿ$್ಮ ಹಾಗೂ ಯುವನಿಧಿ ಯೋಜನೆಗಳು ಜನರಿಗೆ ವರವಾಗಿವೆ. ಅವುಗಳನ್ನು ಸರಿಯಾಗಿ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಪರಿಣಾಮಕಾರಿಯಾಗಿ ಜಾರಿ ಮಾಡಿ. ಅರ್ಹರು ಯೋಜನೆಯಿಂದ ಹೊರಗುಳಿಯದಂತೆ ಎಚ್ಚರವಹಿಸಿ. ಅರ್ಜಿ ಸಲ್ಲಿಸಿದವರಿಗೆ ಸರಿಯಾಗಿ ಯೋಜನೆ ತಲುಪಿಸಿ ಎಂದರು.

ತಾಪಂ ಇಒ ದುಂಡಪ್ಪ ತುರಾದಿ, ತಹಸೀಲ್ದಾರ ವಿಠ್ಠಲ್​ ಚೌಗಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net