

ಕೊಪ್ಪಳ: ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ಸಂಗ್ರಹಣೆ, ವಿತರಣೆ, ಉಳಿಕೆ ಮಾಹಿತಿ ಲಕ ಅಳವಡಿಸಿ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷ ಬಾಲಚಂದ್ರನ್ ಎಸ್. ತಿಳಿಸಿದರು.
ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಬುಧವಾರ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ಸಂಗ್ರಹಣೆ, ವಿತರಣೆ ಮತ್ತು ಆಹಾರ ಧಾನ್ಯ ಉಳಿಕೆ ಮಾಹಿತಿಯುಳ್ಳ ಫಲಕ ಅಳವಡಿಸುತ್ತಿಲ್ಲ ಎಂದು ಸಮಿತಿ ಸದಸ್ಯರು ಗಮನ ಸೆಳೆದರು. ಅಧ್ಯಕ್ಷರು ಪ್ರತಿಕ್ರಿಯಿಸಿ, ಕೂಡಲೇ ಅಳವಡಿಸಲು ಕ್ರಮವಹಿಸಿ. ಇತ್ತೀಚೆಗೆ ಜರುಗಿದ ನ್ಯಾಯಬೆಲೆ ಅಂಗಡಿಗಳ ಸನ್ನದುದಾರರ ಸಭೆಗೆ ಗೈರಾದವರಿಗೆ ನೋಟಿಸ್ ನೀಡಿ. ಮುಂದಿನ ಸಭೆ ಮುನಿರಾಬಾದ ಡ್ಯಾಂ ಗ್ರಾಪಂ ಕಚೇರಿಯಲ್ಲಿ ಆಯೋಜಿಸಲು ಕ್ರಮವಹಿಸಿ. ಅರ್ಹ ಲಾನುಭವಿಗಳಿಗೆ ಯೋಜನೆಗಳನ್ನು ಸರಿಯಾಗಿ ತಲುಪಿಸುವಂತೆ ಸೂಚಿಸಿದರು.
ಗೃಹಲಕ್ಷಿ$್ಮ ಯೋಜನೆಯಡಿ ಜನೆವರಿ ತಿಂಗಳ ಪ್ರೋತ್ಸಾಹಧನ ಬಿಡುಗಡೆಯಾಗಿದೆ. ಶ್ರೀ ಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ೆಬ್ರವರಿ, ಮಾರ್ಚ್ ತಿಂಗಳ ಹಣ ಬಂದಿಲ್ಲ. ಬಂದ ತಕ್ಷಣ ಜಮೆ ಮಾಡುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು. ತಾಪಂ ಇಒ ದುಂಡಪ್ಪ ತುರಾದಿ, ತಹಸೀಲ್ದಾರ ವಿಠ್ಠಲ್ ಚೌಗಲಾ, ಸಮಿತಿ ಸದಸ್ಯರಾದ ದೇವರಾಜ ನಡುವಿನಮನಿ, ರಮೇಶ ಹ್ಯಾಟಿ, ಜ್ಯೋತಿ ಗೊಂಡಬಾಳ, ಸವಿತಾ ಗೊರಂಟ್ಲಿ, ಅನ್ನದಾನಸ್ವಾಮಿ, ಮೆಹಬೂಬಪಾಷಾ, ಪರಶುರಾಮ ಕೊರವರ, ಧರ್ಮರಾಜರಾವ್ ದ್ಯಾಮಪ್ಪ ಡೊಳ್ಳಿನ, ಅನ್ವರ ಹುಸೇನ ಗಡಾದ ಇತರರಿದ್ದರು.