

ಕೊಪ್ಪಳ: ಹನುಮಸಾಗರ ಸಮೀಪದ ಹಿರೇಗೊಣ್ಣಾಗರ ಗ್ರಾಪಂಗೆ ನೂತನ ಅಧ್ಯಕ್ಷರಾಗಿ ಮಾಸಮ್ಮ ಶರಣಪ್ಪ ಮೆಣಸಗೇರಿ, ಉಪಾಧ್ಯಕ್ಷರಾಗಿ ಸಂಗಪ್ಪ ಯಲ್ಲಪ್ಪ ಕುಂಬಾರ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.
ಈ ಹಿಂದೆ ಅಧ್ಯಕ್ಷರಾಗಿದ್ದ ಗೀತಾ ರಂಗಪ್ಪ ವಾಲಿಕಾರ ಅವರ ವಿರುದ್ಧ ಸದಸ್ಯರು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರಿಂದ ಇಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಮಾಸಮ್ಮ ಮೆಣಸಗೇರಿ, ಉಪಾಧ್ಯಕ್ಷ ಸ್ಥಾನಕ್ಕೆ ಸಂಗಪ್ಪ ವಾಲಿಕಾರ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾ ಅಧಿಕಾರಿಯಾಗಿದ್ದ ತಹಸೀಲ್ದಾರ್ ಅಶೋಕ ಶಿಗ್ಗಾವಿ ನಾಮಪತ್ರ ಸಲ್ಲಿಸಿದವರನ್ನು ಜಯಶಾಲಿ ಎಂದು ಘೋಷಿಸಿದರು.
ಪಿಡಿಒ ಪ್ರಶಾಂತ ಹಿರೇಮಠ, ಗ್ರಾಪಂ ಸದಸ್ಯರು, ಸಿಬ್ಬಂದಿಗಳು, ಮುಖಂಡರು ಉಪಸ್ಥಿತರಿದ್ದರು.