ಹೂಲಗೇರಾದಲ್ಲಿ ಸಾಹಿತ್ಯ ಸಮ್ಮೇಳನ

Published on

ಕೊಪ್ಪಳ: ಕುಷ್ಟಗಿ ತಾಲೂಕಿನ 3 ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಗಡಿ ಗ್ರಾಮ ಹೂಲಗೇರಾ ಮದುವನಗಿತ್ತಿ ಯಂತೆ ಶೃಂಗಾರಗೊಂಡಿದೆ.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಕನ್ನಡದ ಬಾವುಟಗಳು ರಾರಾಜಿಸುತ್ತಿವೆ. ಗ್ರಾಮದ ಬೀದಿಗಳನ್ನು ಸ್ವಚ್ಛಗೊಳಿಸಲಾಗಿದ್ದು, ಗ್ರಾಮದಲ್ಲಿ ಹಬ್ಬದ ವಾತಾವರಣ ನಿಮಾರ್ಣವಾಗಿದೆ. ಸಮ್ಮೇಳನಕ್ಕೆ ಗ್ರಾಮದ ಎಂ.ಆರ್​.ಪಾಟೀಲ್​ ಮೈದಾನದಲ್ಲಿ ಸಂಗೀತ ಕಲಾವಿದ ದಿ.ವಾಸಪ್ಪ ಮಾಸ್ತರ್​ ಮಹಾ ವೇದಿಕೆ, ಹೂಲಗೇರಿಯ ದಿ.ಶೇಖರಪ್ಪ ಬುದ್ಧಿನ್ನಿ ಹೆಸರಿನಲ್ಲಿ ಕಲ್ಯಾಣ ಮಂಟಪ ನಿರ್ಮಿಸಲಾಗುತ್ತಿದೆ.

ಶನಿವಾರ ಬೆಳ್ಳಗೆ 7.30 ಕ್ಕೆ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದ್ದು, ಪರಿಫಿತ್​ ಧ್ವಜಾರೋಹಣವನ್ನು ಜಿಲ್ಲಾ ಕಸಾಪ ಅಧ್ಯಕ್ಷ ಶರಣೇಗೌಡ ಪೊಲೀಸ್​ಪಾಟೀಲ್​, ರಾಫ್ಟ್ರಿ ಧ್ವಜಾರೋಹಣವನ್ನು ಸ್ವಾಗತ ಸಮಿತಿ ಅಧ್ಯಕ್ಷ ವಿಧಾನ ಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ ದೊಡ್ಡನಗೌಡ ಎಚ್​. ಪಾಟೀಲ್​, ಕನ್ನಡ ಧ್ವಜಾರೋಹಣವನ್ನು ಕಸಾಪ ತಾಲೂಕಧ್ಯಕ್ಷ ಲೆಂಕಪ್ಪ ವಾಲಿಕಾರ ನೆರವೇರಿಸಲಿದ್ದಾರೆ.

ಬೆಳಗ್ಗೆ 8.30ಕ್ಕೆ ಸಮ್ಮೇಳನಾಧ್ಯಕ್ಷರೊಂದಿಗೆ ನಾಡದೇವತೆಯ ಭಾವಚಿತ್ರ ಮೆರವಣಿಗೆ ಜರುಗಲಿದ್ದು, ಶ್ರೀ ಗುಂಡಮಲ್ಲೇಶ್ವರ ದೇವಸ್ಥಾನದಿಂದ ಆರಂಭವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net