ಆರೋಗ್ಯ ಎಲ್ಲಕ್ಕಿಂತ ಮುಖ್ಯ

district koppal health chekup camp kinnala village
Published on

ಕೊಪ್ಪಳ: ಆರೋಗ್ಯವೇ ಭಾಗ್ಯ. ಎಲ್ಲರೂ ಉತ್ತಮ ಆರೋಗ್ಯ ಹೊಂದಬೇಕು. ಅಂದಾಗ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಮಹಾಂತೇಶ ಎಸ್​.ದರಗದ ತಿಳಿಸಿದರು.

ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಪ್ರಾಧಿಕಾರದಿಂದ ಸೋಮವಾರ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ಪಡೆಯುವ ಜತೆಗೆ ಆರೋಗ್ಯ ಕಾಳಜಿವಹಜಿಸಬೇಕು. ಆರೋಗ್ಯ ಏರುಪೇರಾದರೆ ಜೀವನ ಸಾಗಿಸುವುದು ಕಷ್ಟ. ಕಿನ್ನಾಳ ಗ್ರಾಮವನ್ನು ದತ್ತು ಗ್ರಾಮವಾಗಿ ಸ್ವೀಕರಿಸಲಾಗಿದೆ. ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರ ಭಾಗವಾಗಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಗ್ರಾಮಸ್ಥರು ಕಾರ್ಯಕ್ರಮದ ಸದುಪಯೋಗ ಪಡೆಯಿರಿ. ಉತ್ತಮ ಜೀವನ ಶೈಲಿ ರೂಢಿಸಿಕೊಳ್ಳಿ. ಆರೋಗ್ಯ ಕಾಪಾಡಿಕೊಳ್ಳಿ. ಆರೋಗ್ಯವಾಗಿದ್ದರೆ ಗ್ರಾಮ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಸಲಹೆ ನೀಡಿದರು.

250ಕ್ಕೂ ಹೆಚ್ಚು ಜನರು ತಪಾಸಣೆ ಮಾಡಿಸಿಕೊಂಡರು. ಗ್ರಾಪಂ ಅಧ್ಯೆ ಶ್ವೇತಾ ರಾವೇಂದ್ರ ಡಂಬಳ, ಗವಿಸಿದ್ದೇಶ್ವರ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ.ಮಹಾಂತೇಶ ಸಾಲಿಮಠ, ಪ್ರಾಧ್ಯಾಪಕರಾದ ಡಾ.ಗವಿಸಿದ್ದನಗೌಡ ಪಾಟೀಲ್​, ಕಿನ್ನಾಳ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಇಾರ್ನ್​ ಅಂಜುಂ, ಆಯುಷ್​ ವೈದ್ಯಾಧಿಕಾರಿ ಡಾ.ಶರಣಪ್ಪ ಹೈದ್ರಿ, ಪಿಡಿಒ ಪರಮೇಶ್ವರಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net