ಕೊಪ್ಪಳದಲ್ಲಿ ಅರ್ಹರಿಗೆ ನಿವೇಶನ ಹಂಚಿಕೆ

koppal houseless people protest minister visit cmc
ಕೊಪ್ಪಳದಲ್ಲಿ ಧರಣಿ ನಿರತ ನಿವೇಶನ ರಹಿತರೊಂದಿಗೆ ಸಚಿವ ಶಿವರಾಜ ತಂಗಡಗಿ ಚರ್ಚಿಸಿದರು. ಜಿಪಂ ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ್​, ಕೃಷ್ಣಾ ಇಟ್ಟಂಗಿ, ಡಿಸಿ ನಲಿನ್​ ಅತುಲ್​, ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಗಾಳೆಪ್ಪ ಮುಂಗೋಲಿ ಇದ್ದರು.
Published on

ಕೊಪ್ಪಳ:ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆ ಆರಂಭಿಸಿದ್ದೇವೆ. ಅರ್ಹರಿಗೆಲ್ಲ ಆದ್ಯತೆ ಅನುಸಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭರವಸೆ ನೀಡಿದರು.

ನಗರಸಭೆ ಮುಂಭಾಗದಲ್ಲಿ ಅರ್ನಿಧಿಷ್ಟ ಧರಣಿ ನಡೆಸುತ್ತಿರುವ ನಿವೇಶನ ರಹಿತರನ್ನುದ್ದೇಶಿಸಿ ಶುಕ್ರವಾರ ಮಾತನಾಡಿದರು.

ಈಗಾಗಲೇ ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿನ ಬಡ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಭೂಮಿ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ನಿವೇಶನ ರಹಿತರಿಂದಲೂ ಅರ್ಜಿ ಆಹ್ವಾನಿಸಿದ್ದೇವೆ.

ಜಮೀನು ಖರೀದಿ ಪ್ರಕ್ರಿಯೆ ಮುಗಿದ ನಂತರ ನಿವೇಶನ ಹಂಚಿಕೆ ಮಾಡಲಾಗುವುದು. ವಸತಿ ಯೋಜನೆಯಡಿ ಮನೆ ನಿರ್ಮಿಸಿ ಕೊಡುತ್ತೇವೆ ಎಂದು ಭರವಸೆ ನೀಡಿದರು.

ಜಿಪಂ ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ್​, ಕೃಷ್ಣಾ ಇಟ್ಟಂಗಿ, ಡಿಸಿ ನಲಿನ್​ ಅತುಲ್​, ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ, ಎಸಿ ಕ್ಯಾಪ್ಟನ್​ ಮಹೇಶ ಮಾಲಗಿತ್ತಿ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಗಾಳೆಪ್ಪ ಮುಂಗೋಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net