ಮಾನವ ಹಕ್ಕುಗಳ ಬಗ್ಗೆ ಅರಿಯಿರಿ, ನ್ಯಾ.ಮಹಾಂತೇಶ ದರಗದ ಹೇಳಿಕೆ

district koppal human rights protaction programme
Published on

ಕೊಪ್ಪಳ: ಮಾನವ ಹಕ್ಕುಗಳು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶಗಳನ್ನು ನೀಡಿವೆ. ಈ ಬಗ್ಗೆ ಎಲ್ಲರೂ ಅರಿವು ಹೊಂದಿರಬೇಕು ಎಂದು ಹಿರಿಯ ಸಿವಿಲ್​ ನ್ಯಾಯಾಧೀಶ ಮಹಾಂತೇಶ ಎಸ್​.ದರಗದ ಹೇಳಿದರು.

ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಮಂಗಳವಾರ ಹಮ್ಮಿಕೊಂಡಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಎಲ್ಲರೂ ಶುದ್ಧ ಕುಡಿವ ನೀರು, ಗಾಳಿ, ಪರಿಸರ ಹೊಂದಿ ಉತ್ತಮವಾಗಿ ಬದುಕುವ ಹಕ್ಕು ಹೊಂದಿದ್ದಾರೆ. ವಾಕ್​ ಸ್ವಾತಂತ್ರ್ಯ, ಧರ್ಮ ಆಚರಣೆ ಸೇರಿ ಇತರ ಹಕ್ಕುಗಳನ್ನು ಕಲ್ಪಿಸಿದೆ. ಮನುಷ್ಯ ಮನುಷ್ಯನಾಗಿ ಗೌರವದಿಂದ ಬಾಳಲು ಮಾನವ ಹಕ್ಕುಗಳು ಜಾರಿಯಲ್ಲಿವೆ. ನಿತ್ಯದ ಬದುಕಲ್ಲಿ ಮಾನವ ಹಕ್ಕುಗಳ ಉಲ್ಲಂನೆ ಕಾಣಬಹುದು. ಈ ಬಗ್ಗೆ ಅಷ್ಟಾಗಿ ಎಲ್ಲರಿಗೂ ಅರಿವಿಲ್ಲ. ಎಲ್ಲರೂ ಮಾನವ ಹಕ್ಕುಗಳ ಬಗ್ಗೆ ಅರಿಯಬೇಕೆಮದು ತಿಳಿಸಿದರು.

ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ ಮಾತನಾಡಿ, ಎಲ್ಲರೂ ನೆಮ್ಮದಿಯಿಂದ ಬದುಕಲು ಸಂವಿಧಾನ ಮೂಲಭೂತ ಹಕ್ಕು ನೀಡಿದೆ. ಮಾನವ ಹಕ್ಕುಗಳ ರಕ್ಷಣೆಗೆ ಕಾಯ್ದೆ ರೂಪಿಸಲಾಗಿದೆ. ಎಲ್ಲರೂ ಈ ಬಗ್ಗೆ ಅರಿಯಿರಿ. ಶಿಕ್ಷಣದಿಂದ ಮಕ್ಕಳನ್ನು ವಂಚಿತರನ್ನಾಗಿ ಮಾಡುವುದು ಅವರ ಹಕ್ಕಿನ ಉಲ್ಲಂನೆಯಾಗಲಿದೆ ಎಂದರು.

ಮಂಗಳೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಪ್ರಭುರಾಜ ನಾಯಕ ಉಪನ್ಯಾಸ ನೀಡಿದರು. ಮಾಜಿ ಸಿಎಂ ಎಸ್​.ಎಂ.ಕೃಷ್ಣ ನಿಧನ ಹಿನ್ನೆಲೆಯಲ್ಲಿ ಸಂತಾಪ ಸೂಚಿಸಲಾಯಿತು. ಜಿಲ್ಲಾ ತರಬೇತಿ ಸಂಸ್ಥೆ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ ಪ್ರತಿಜ್ಞಾ ವಿಧಿ ಬೋಧಿಸಿದರು.

ಎಸ್ಪಿ ಡಾ.ರಾಮ್​ ಎಲ್​.ಅರಸಿದ್ದಿ, ಎಡಿಸಿ ಸಿದ್ರಾಮೇಶ್ವರ, ವಕೀಲರ ಸಂದ ಜಿಲ್ಲಾಧ್ಯಕ್ಷ ಎ.ವಿ.ಕಣವಿ, ಡಿಡಿಪಿಯು ಜಗದೀಶ, ಯುನಿಸ್​ೆ ಜಿಲ್ಲಾ ಸಂಯೋಜಕ ಹರೀಶ ಜೋಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net