

ಕೊಪ್ಪಳ: ಜಿಲ್ಲಾ ಕೇಂದ್ರ ಕೊಪ್ಪಳ ಸೇರಿ ಜಿಲ್ಲಾದ್ಯಂತ ಶುಕ್ರವಾರ 79ನೇ ಸ್ವಾತಂತ್ರ$್ಯ ದಿನಾಚರಣೆಯನ್ನು ಸಡಗರ&ಸಂಭ್ರಮದಿಂದ ಆಚರಿಸಲಾಯಿತು.
ಕನ್ನಡ ಮತ್ತು ಸಂಸತಿ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿ, ದೇಶದ ಸ್ವಾತಂತ್ರ$್ಯಕ್ಕಾಗಿ ಅನೇಕ ಮಹನೀಯರು ತಮ್ಮ ಜೀವ ತ್ಯಾಗ ಮಾಡಿದ್ದಾರೆ. ಈ ಹೊತ್ತಿನಲ್ಲಿ ಅವರನ್ನೆಲ್ಲ ನೆನೆಯುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಸ್ವಾತಂತ್ರ$್ಯ ಹೋರಾಟದಲ್ಲಿ ಕೊಪ್ಪಳ ಜಿಲ್ಲೆಯ ಕೊಡುಗೆಯೂ ಅಪಾರ. ಮುಂಡರಗಿ ಭೀಮರಾಯ, ಹಮ್ಮಿಗಿ ಕೆಂಚನಗೌಡರು, ಶಿರೂರು ವೀರಭದ್ರಪ್ಪ, ಶಿವಮೂರ್ತಿಸ್ವಾಮಿ ಅಳವಂಡಿ ಸೇರಿ ಅನೇಕರು ಶ್ರಮಿಸಿದ್ದಾರೆಂದರು.
ಕಲ್ಯಾಣ ರಾಜ್ಯ ಆಲೋಚನೆಯಡಿ ರಾಜ್ಯ ಸರ್ಕಾರ ಆಡಳಿತ ನಡೆಸುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳು ಜನತೆಗೆ ವರವಾಗಿದೆ. ಜಿಲ್ಲೆಯಲ್ಲೂ ಅನೇಕ ಲಾನುಭವಿಗಳಿದ್ದಾರೆ. ಜಿಪಂ ನರೇಗಾದಲ್ಲಿ ಸಾಧನೆ ಮುಂದುವರೆಸಿದೆ. ವಸತಿ ಯೋಜನೆಯಡಿ ಸಾವಿರಾರು ಮನೆಗಳನ್ನು ನಿರ್ಮಿಸಲಾಗಿದೆ. ಉತ್ತಮ ಮಳೆಯಾಗಿದ್ದು, ಶೇ.110ರಷ್ಟು ಬಿತ್ತನೆಯಾಗಿದೆ. ಕನಕಗಿರಿ ತಾಲೂಕಿನ ಸಿರವಾರದಲ್ಲಿ 200 ಎಕರೆಯಲ್ಲಿ ತೋಟಗಾರಿಕೆ ಟೆಕ್ ಪಾರ್ಕ್ ನಿರ್ಮಾಣವಾಗುತ್ತಿದೆ. ಎಲ್ಲ ಇಲಾಖೆಗಳಿಗೂ ಅಗತ್ಯ ಅನುದಾನ ಒದಗಿಸಿ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
17 ತುಕಡಿಗಳು ಶಿಸ್ತುಬದ್ಧವಾಗಿ ಪಥಸಂಚಲನ ನಡೆಸಿದವು. ವಿವಿಧ ಶಾಲೆ ಮಕ್ಕಳು ರಾಷ್ಟ್ರಭಕ್ತಿ ಗೀತೆಗಳಿಗೆ ನೃತ್ಯ ಮಾಡಿ ನೆರೆದವರನ್ನು ರಂಜಿಸಿದರು. ಎಸ್ಸೆಸ್ಸೆಲ್ಸಪಿ, ದ್ವೀತಿಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಮಕ್ಕಳು, ವಿವಿಧ ರಂಗದ ಗಣ್ಯರನ್ನು ಸನ್ಮಾನಿಸಲಾಯಿತು. ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾವೇಂದ್ರ ಹಿಟ್ನಾಳ, ವಿಪ ಸದಸ್ಯೆ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ, ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ, ಜಿಪಂ ಸಿಇಒ ವರ್ಣಿತ್ ನೇಗಿ, ಎಸ್ಪಿ ಡಾ.ರಾಮ್ ಎಲ್.ಅರಸಿದ್ದಿ, ಎಡಿಸಿ ಸಿದ್ರಾಮೇಶ್ವರ, ಎಸಿ ಕ್ಯಾ.ಮಹೇಶ ಮಾಲಗಿತ್ತಿ ಇತರರಿದ್ದರು.