ಕೊಪ್ಪಳದಲ್ಲಿ ಮಹಿಳೆಯರಿಗೆ ಉದ್ಯೋಗಕ್ಕಾಗಿ ನೇರ ಸಂದರ್ಶನ

koppal interview for womens
Published on

ಕೊಪ್ಪಳ: ಮಹಿಳೆಯರಿಗೆ ಉದ್ಯೋಗಕ್ಕಾಗಿ ನೇರ ಸಂದರ್ಶನ ಆಗಸ್ಟ್​ 13ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರ ವರೆಗೆ ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಪ್ರತಿಷ್ಠಿತ ಖಾಸಗಿ ಕಂಪನಿಯು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್​.ಎಸ್​.ಎಲ್​.ಸಿ, ಪಿಯುಸಿ, ಡಿಪ್ಲೋಮಾ, ಮತ್ತು ಪದವಿಧರ ಮಹಿಳಾ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಉಚಿತ ಪ್ರವೇಶವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿಜಿಲ್ಲಾಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಅಥವಾ ದೂ.ಸಂ: 08539-220859, ಮೊಸಂ: 6361143422 ಹಾಗೂ 8431525339 ಮೂಲಕ ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net