ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ

Published on

ಕೊಪ್ಪಳ: ಅಪ್ರಾಪ್ತಳ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ 5 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ (ಪೋಕ್ಸೋ) ನ್ಯಾಯಾಲಯ ಆದೇಶಿಸಿದೆ.

ಭೀಮೇಶ ಶಿೆಗೆ ಗುರಿಯಾದಾತ. ಮುನಿರಾಬಾದ್​ ಪೊಲೀಸ್​ಠಾಣೆ ವ್ಯಾಪ್ತಿ ಗ್ರಾಮವೊಂದರ ಬಾಲಕಿಯನ್ನು ಜಾತ್ರೆಯಲ್ಲಿ ಪರಿಚಯ ಮಾಡಿಕೊಂಡಿದ್ದ. ಪ್ರೀತಿಸುವುದಾಗಿ ಹೇಳಿ ಮದುವೆ ಆಗುವುದಾಗಿ ನಂಬಿಸಿದ್ದ. 2022ರ ಆಗಸ್ಟ್​ 13ರಂದು ಸಾಲುಮರದ ತಿಮ್ಮಕ್ಕ ಪಾರ್ಕ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. 2022ರ ಸೆಪ್ಟೆಂಬರ್​ 1 ರಂದು ಬಾಧಿತಳು ಕಾಲೇಜಿಗೆಂದು ಕೊಪ್ಪಳಕ್ಕೆ ಹೋಗಿ ಅಲ್ಲಿಂದ ಮಂಡ್ಯದ ಮಳವಳ್ಳಿಯ ನರ್ಸರಿಯೊಂದಕ್ಕೆ ಕರೆದೊಯ್ದಿದ್ದ. ಅಲ್ಲಿಯೂ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಮುನಿರಾಬಾದ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐ ವಿಶ್ವನಾಥ ಹಿರೇಗೌಡರ್​ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಭೀಮೇಶನನ್ನು ಅಪರಾಧಿ ಎಂದು ತೀರ್ಮಾನಿಸಿದೆ. ಅಪರಾಧಿಗೆ 20ವರ್ಷ ಜೈಲುಶಿಕ್ಷೆ, 5 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶ ಡಿ.ಕೆ.ಕುಮಾರ, ಮೇ 5ರಂದು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ಎಲ್​.ದೇಸಾಯಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net