ಅಂಜನಾದ್ರಿ ಪ್ರಸಿದ್ದ ಪ್ರವಾಸಿ ಸ್ಥಳ : ಜಿ. ಜನಾರ್ಧನ ರೆಡ್ಡಿ

district koppal gangavathi tourism day celebration mla janardhana reddi
Published on

ಕೊಪ್ಪಳ: ಆಂಜನೇಯ ಜನ್ಮಸ್ಥಳವಾದ ಅಂಜನಾದ್ರಿ ನಮ್ಮ ಭಾಗದ ಪ್ರಸಿದ್ಧ ಪ್ರವಾಸಿ ತಾಣವಾಗಿದ್ದು ಇದರ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ. ಜನಾರ್ಧನ ರೆಡ್ಡಿ ಹೇಳಿದರು.

ಶುಕ್ರವಾರ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನ ಅಂಗವಾಗಿ ಆನೆಗೊಂದಿ ಗ್ರಾಮದ ಗಗನ್​ ಮಹಲದಿಂದ ಅಂಜನಾದ್ರಿ ಬೆಟ್ಟದವರೆಗೆ ಹಮ್ಮಿಕೊಂಡಿದ್ದ "ಪ್ಲಾಗ ರನ್​" ಪ್ಲಾಸ್ಟಿಕ್​ ಬಳಕೆ ಮುಕ್ತ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರವಾಸೋದ್ಯಮ ಇಲಾಖೆ ನನ್ನ ಇಷ್ಟದ ಇಲಾಖೆ. ನಾನು ಈ ಹಿಂದೆ ಪ್ರವಾಸೋದ್ಯಮ ಇಲಾಖೆ ಸಚಿವನಾಗಿದ್ದಾಗ ನಮ್ಮ ಭಾಗದಲ್ಲಿ 6 ಜಂಗಲ್​ ಲಾಡ್ಜಗಳಿದ್ದವು 19 ಜಂಗಲ್​ ಲಾಡ್ಜಗಳನ್ನು ಕಟ್ಟುವ ಕೆಲಸ ಮಾಡಿದೆ. ಹಂಪಿಯಲ್ಲಿ 500 ಕೋಟಿ ಅನುದಾನ ಕೇಂದ್ರ ಮತ್ತು ರಾಜ್ಯ ಸರ್ಕಾರದ ಶೇ.50:50ರ ಅನುಪಾತದಲ್ಲಿ ಹಂಪಿಗೆ ಬರುವ ಪ್ರವಾಸಿಗರಿಗೆ ಅನುಕೂಲವಾಗಲು ಹಂಪಿ, ಹೊಸಪೇಟೆ, ಕಮಲಾಪುರ ತಿರುಗಾಡಲು ಬ್ಯಾಟರಿಚಾಲಿತ ಕಾರುಗಳ ಜೊತೆಗೆ ಇತರೆ ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದೆ. 350 ಎಕರೆ ಪ್ರದೇಶದಲ್ಲಿ ಅಟಲ್​ ಬಿಹಾರಿ ವಾಜಪೇಯಿ ಜೂ ಪಾರ್ಕ ಮಾಡಲಾಯಿತು. ಪ್ರವಾಸೋದ್ಯಮ ಬೆಳವಣಿಗೆಯಿಂದ ನಮ್ಮ ಭಾಗದ ವ್ಯಾಪಾರಸ್ಥರಿಗೆ ಅನುಕೂಲವಾಯಿತು ಎಂದರು.

ಪ್ಲಾಸ್ಟಿಕ್​ ಬಳಕೆ ಮುಕ್ತ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು, ಈ ವರ್ಫಿದ ವಿಶ್ವ ಪ್ರವಾಸೋದ್ಯಮ ದಿನದ ಸಂದೇಶ ಪ್ರವಾಸೋದ್ಯಮ ಮತ್ತು ಸುಸ್ಥಿರ ಪರಿವರ್ತನೆ ಎಂಬುದಾಗಿದೆ. ಕಿಷ್ಕಿಂದಾ ಭಾಗದಲ್ಲಿ ರಾಫ್ಟ್ರಿ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರು ಬರುತ್ತಾರೆ. ಪರಿಸರಕ್ಕೆ ಹಾನಿಯಾಗಭಾರದು ಮತ್ತು ಇಲ್ಲಿಗೆ ಬರುವ ಪ್ರವಾಸಿಗರಿಗೆ ಒಳ್ಳೆಯ ವಾತಾವರಣ ಇರಬೇಕು ಎನ್ನುವ ಉದ್ದೇಶದಿಂದ ಜನರಲ್ಲಿ ಅರಿವು ಮೂಡಿಸಲು ಪ್ಲಾಸ್ಟಿಕ್​ ಬಳಕೆ ಮುಕ್ತ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಆನೆಗೊಂದಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಹುಲಿಗೆಮ್ಮ ಹೊನ್ನಪ್ಪ ನಾಯಕ್​, ಜಿಲ್ಲಾ ಪಂಚಾಯತ ಯೋಜನಾ ನಿರ್ದೆಶಕ ಪ್ರಕಾಶ, ಪ್ರಾಚ್ಯವಸ್ತು ಇಲಾಖೆ ಅಧಿಕಾರಿ ಶೇಜೇಶ್ವರ, ಆನೆಗೊಂದಿ ರಾಜ ವಶಂಸ್ಥೆ ಲಲಿತಾರಾಣಿ ಶ್ರೀ ರಂಗದೇವರಾಯಲು, ರಾಜಾ ಶ್ರೀ ಕೃಷ್ಣ ದೇವರಾಯ, ಲಕ್ಷಿ$್ಮ ಅರುಣಾ ಜನಾರ್ದನ ರೆಡ್ಡಿ, ಪ್ರವಾಸೋದ್ಯಮ ಇಲಾಖೆಯ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net