

ಕೊಪ್ಪಳ: ಬಿಎಸ್ಪಿಎಲ್ ಕಾರ್ಖಾನೆ ಸ್ಥಾಪನೆ ಖಂಡಿಸಿ ೆ.24ರಂದು ಕರೆ ನೀಡಿರುವ ಕೊಪ್ಪಳ ತಾಲೂಕು ಬಂದ್ಗೆ ಜೆಡಿಎಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ತಿಳಿಸಿದ್ದಾರೆ.
ಅಂದು ಕೊಪ್ಪಳ ತಾಲೂಕು ಹಾಗೂ ಜಿಲ್ಲಾ ಘಟಕ ಪದಾಧಿಕಾರಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಂದಿನ ಪೀಳಿಗೆಯ ಭವಿಷ್ಯದ ಸರ್ವನಾಶದ ದ್ಯೋತಕವಾಗಿರುವ ಕಾರ್ಖಾನೆ ಕೊಪ್ಪಳದಿಂದ ತೊಲಗಬೇಕೆಂಬುದು ಪಕ್ಷದ ಆಶಯ. ಪಕ್ಷದ ಕಾರ್ಯಕರ್ತರು ಜಿಲ್ಲೆಯಾದ್ಯಂತ ಹೋರಾಟದ ಮಹತ್ವ ಹಾಗೂ ಕಾರ್ಖಾನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಿದ್ದಾರೆ. ಜನರು ಸಹಕರಿಸುವಂತೆ ಮನವಿ ಮಾಡಿದ್ದಾರೆ.