ಕೇಂದ್ರ ಸರ್ಕಾರದ ಮಧ್ಯ ಪ್ರವೇಶಕ್ಕೆ ಆಗ್ರಹ

district koppal jds kumaraswami cvc mspl
Published on

ಕೊಪ್ಪಳ: ಜಿಲ್ಲೆಯಲ್ಲಿ ಬಲ್ಡೋಟಾ ಕಾರ್ಖಾನೆ ವಿಸ್ತರಣೆಯಿಂದ ಜನರಿಗೆ ಸಮಸ್ಯೆ ಆಗಲಿದೆ. ತಕ್ಷಣ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಜನರ ಮನವಿಗೆ ಸ್ಪಂದಿಸಬೇಕೆಂದು ಒತ್ತಾಯಿಸಿ ಜೆಡಿಎಸ್​ ರಾಜ್ಯ ಕೋರ್​ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ್​ ಕೇಂದ್ರ ಸಚಿವ ಎಚ್​.ಡಿ.ಕುಮಾರಸ್ವಾಮಿಗೆ ಶುಕ್ರವಾರ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು.

ಬಲ್ಡೋಟ ಸಮೂಹ ಹಾಗೂ ರಾಜ್ಯ ಸರ್ಕಾರ ಉಕ್ಕು ಘಟಕದ ಸ್ಥಾಪನೆಗೆ ಒಪ್ಪಂದ ಮಾಡಿಕೊಂಡಿದೆ. ಇದಕ್ಕೆ ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಕೈಗಾರಿಕೆಗಳಿಂದ ಈಗಾಗಲೇ ಕೊಪ್ಪಳದ ಜನರು ನಲುಗಿದ್ದಾರೆ. ರಾಜ್ಯ ಸರ್ಕಾರ ಜನರನ್ನು ಬಾಣಲೆಯಿಂದ ಬೆಂಕಿಗೆ ಹಾಕಿದೆ. ಜನರ ಆರೋಗ್ಯ ಹಾಗೂ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಈ ಯೋಜನೆ ಯಾವುದೇ ಕಾರಣಕ್ಕೂ ಜಾರಿಯಾಗಬಾರದು. ಕೈಗಾರಿಕೆ ನಿಯಮಾವಳಿ ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು.

ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು, ಕೊಪ್ಪಳದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಮಾಹಿತಿ ಇದೆ. ಅಭಿವೃದ್ಧಿಗೆ ಕೈಗಾರಿಕಾ ಘಟಕಗಳ ಸ್ಥಾಪನೆ ಅಗತ್ಯ. ಆದರೆ ಜನರ ಆರೋಗ್ಯ, ಪರಿಸರ ಹಾಗೂ ಕೃಷಿ ಕ್ಷೇತ್ರಗಳಿಗೆ ಮಾರಕವಾಗುವ ಯಾವುದೇ ಯೋಜನೆಗಳನ್ನು ಒಪ್ಪಲಾಗದು. ಕೊಪ್ಪಳ ಜನತೆಯ ಬೇಡಿಕೆಗೆ ಸೂಕ್ತವಾಗಿ ಸ್ಪಂದಿಸಲಾಗುವುದು ಎಂದರು.

ಜೆಡಿಎಸ್​ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net