ಮಹಿಳೆ ಆರ್ಥಿಕ ಸಬಲಳಾಗಬೇಕು

Published on

ಕೊಪ್ಪಳ: ಮಹಿಳೆ ಸಾಮಾಜಿ, ಆರ್ಥಿಕವಾಗಿ ಸಬಲಳಾಗಬೇಕು ಎಂದು ಹಿರಿಯ ಸಿವಿಲ್​ ನ್ಯಾಯಾಧೀಶ ಮಹಾಂತೇಶ ಎಸ್​.ದರಗದ ಹೇಳಿದರು.

ಜಿಲ್ಲಾಡಳಿತ, ಕಾನೂನು ಸೇವಾ ಪ್ರಾಧಿಕಾರದಿಂದ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಎಲ್ಲರೂ ಸಮಾನರು ಎಂದರೆ ಸಾಲದು. ಮಹಿಳೆಯರಿಗೂ ಸಮಾನ ಅವಕಾಶ ನೀಡಬೇಕು. ಅಂದಾಗ ಸಮ ಸಮಾಜ ನಿರ್ಮಾಣವಾಗಲಿದೆ. ಸಮಾಜದಲ್ಲಿ ಮಹಿಳೆಯರು ತುಂಬಾ ನೋವನುಭವಿಸುತ್ತಿದ್ದಾರೆ. ಪುರುಷ ಪ್ರಧಾನ ಸಮಾಜವಿದ್ದು, ಮಹಿಳೆಗೆ ನಿರಂತರ ಅನ್ಯಾಯವಾಗುತ್ತಿದೆ. ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾಳೆ. ಅದನ್ನು ತಡೆವ ಕೆಲಸವಾಗಬೇಕೆಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ ಮಾತನಾಡಿದರು. ವಕೀಲರ ಸಂದ ಜಿಲ್ಲಾಧ್ಯಕ್ಷ ಎ.ವಿ.ಕಣವಿ, ತಹಸೀಲ್ದಾರ್​ ವಿಠ್ಠಲ ಚೌಗಲಾ, ತಾಪಂ ಇಒ ದುಂಡಪ್ಪ ತುರಾದಿ, ಯುನಿಸ್​ೆ ಸಂಯೋಜಕ ಹರೀಶ ಜೋಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ವಕೀಲ ಬಿ.ಎಂ.ಮಂಜುನಾಥ, ಸಿಪಿಐ ಆಂಜನೇಯ, ಸರೋಜಾ ಬಾಕಳೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net