

ಕೊಪ್ಪಳ: ಪ್ರತಿ ವರ್ಷದಂತೆ ಈ ವರ್ಷ ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ ಅಚ್ಚುಕಟ್ಟಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
ಸೆ.17ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನ ಆವರಣದಲ್ಲಿ ಧ್ವಜಾರೋಹಣ ಇರಲಿದೆ. ಬಳಿಕ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡುವರು. ಎಲ್ಲ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗಿಯಾಗಬೆಕು. ವೇದಿಕೆ, ಪೆಂಡಾಲ್ ವ್ಯವಸ್ಥೆ ಮಾಡಿ. ಕ್ರೀಡಾಂಗಣ ಸ್ವಚ್ಛತೆ, ಲೈಟಿಂಗ್, ಕುಡಿವ ನೀರು ಇನ್ನಿತರ ಸೌಲಭ್ಯ ಒದಗಿಸಿ. ಶಾಲಾ ಮಕ್ಕಳ ಸಾಂಸತಿಕ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಿ.
ಎಲ್ಲ ಇಲಾಖೆ ಅಧಿಕಾರಿಗಳು ನಿಮಗೆ ವಹಿಸಿದ ಜವಾಬ್ದಾರಿ ಸರಿಯಾಗಿ ನಿಭಾಯಿಸಿ. ಕಾರ್ಯಕ್ರಮ ದಿನದಂದು ನಗರಾದ್ಯಂತ ಎಲ್ಲೆಡೆ ವಿದ್ಯುತ್ ದೀಪಾಲಂಕಾರ ಮಾಡಿ. ಪೊಲೀಸ್, ಎನ್ಸಿಸಿ, ಎನ್ಎಸ್ಎಸ್, ಸೇವಾದಳ ಇನ್ನಿತರ ಮಕ್ಕಳ ಪಥ ಸಂಚಲ ಇರಲಿ. ಅಗ್ನಿ ಅವಡ, ತುರ್ತು ಆರೋಗ್ಯ ಸೇವೆ ಒದಗಿಸಲು ಕ್ರಮವಹಿಸಿ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದರು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಎಎಸ್ಪಿ ಹೆಮಂತ್ ಕುಮಾರ್, ಜಿಪಂ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಡಿಡಿಪಿಐ ಸೋಮಶೇಖರಗೌಡ ಪಾಟೀಲ್, ತಹಸೀಲ್ದಾರ್ ವಿಠ್ಠಲ್ ಚೌಗಲಾ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ್, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ನಗರಸಭೆ ಪೌರಾಯುಕ್ತ ವೇಂಕಟೇಶ ನಾಗನೂರು ಇತರರಿದ್ದರು.